ಮಧು ಬಂಗಾರಪ್ಪ ಗೆಲ್ಲಿಸಲು ರಣತಂತ್ರ ರೆಡಿ, ಜೆಡಿಎಸ್ ಏನೆಲ್ಲ ಪ್ಲಾನ್ ಮಾಡಿಕೊಂಡಿದೆ? ಪ್ರಚಾರ ಹೇಗೆ ನಡೆಯುತ್ತೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019

Shivamogga-Live-Number-1-Website

ಪ್ರಚಾರದ ಕಣಕ್ಕೆ ಲೇಟಾಗಿ ಎಂಟ್ರಿ ಕೊಡುತ್ತಿದ್ದರೂ, ಭರ್ಜರಿ ಕ್ಯಾಂಪೇನ್’ಗೆ ಮೈತ್ರಿ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಶತಾಯಗತಾಯ ಸೋಲಿಸಲೇಬೇಕು ಅಂತಾ ಪ್ಲಾನಿಂಗ್ ಮಾಡಿಕೊಳ್ಳಲಾಗಿದೆ. ಇನ್ನು, ಶಿವಮೊಗ್ಗ ಲೋಕಸಭೆ ಚುನಾವಣೆಯ ಉಸ್ತುವಾರಿಯನ್ನು ಕಾಂಗ್ರೆಸ್  ಪಕ್ಷದ ಚುನಾವಣಾ ಚಾಣಕ್ಯ ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಲಾಗಿದೆ.

ಏನೆಲ್ಲ ಪ್ಲಾನ್ ಮಾಡಲಾಗಿದೆ?

ದೇವೇಗೌಡರಿಂದ ಮತಬೇಟೆ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಈಗಾಗಲೇ ಮಧು ಬಂಗಾರಪ್ಪ ಪರವಾಗಿ ಕ್ಯಾಂಪೇನ್ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆಗೆ ರಹಸ್ಯ ಸಭೆ ನಡೆಸಿ, ಟಾಸ್ಕ್ ನೀಡಿದ್ದಾರೆ. ಪ್ರತ್ಯೇಕವಾಗಿ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

170319 Devegowda and Kagodu Thimmappa Meeting

ತಳಮಟ್ಟದವರೆಗೆ ಟಾರ್ಗೆಟ್

ತಳಮಟ್ಟದವರೆಗೂ ಪ್ರಚಾರ ಕೈಗೊಳ್ಳಲು ಪ್ಲಾನಿಂಗ್ ಮಾಡಿಕೊಳ್ಳಲಾಗಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗೂ ಮಧು ಬಂಗಾರಪ್ಪ ಖುದ್ದಾಗಿ ತೆರಳಲಿದ್ದಾರೆ. ಈಗಾಗಲೇ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಗ್ರಾಮ ಪಂಚಾಯಿತಿಗಳ ಪಟ್ಟಿ ಸಿದ್ಧಪಡಿಸಿದ್ದಾರೆ. ಯಾವ್ಯಾವ ಪಂಚಾಯಿತಿಗೆ ಯಾವಾಗ ತೆರಳಬೇಕು ಎಂಬ ಪ್ಲಾನ್ ಕೂಡ ಸಿದ್ಧವಾಗಿದೆ.  

54277864 580916659054915 1249038113867563008 n.jpg? nc cat=103& nc ht=scontent.fblr1 3

ಶಿವಮೊಗ್ಗ ಚುನಾವಣಾ ಕಣಕ್ಕೆ ‘ಚಾಣಕ್ಯ’

ಇನ್ನು, ಕಾಂಗ್ರೆಸ್ ಪಕ್ಷದ ಪಾಲಿನ ಚುನಾವಣಾ ಚಾಣಕ್ಯ ಸಚಿವ ಡಿ.ಕೆ.ಶಿವಕುಮಾರ್, ಈ ಬಾರಿ ಮೈತ್ರಿ ಅಭ್ಯರ್ಥಿ ಪರವಾಗಿ ಶಿವಮೊಗ್ಗ ಪ್ರಚಾರ ಕಣಕ್ಕೆ ಧುಮುಖಲಿದ್ದಾರೆ. ಬಿಜೆಪಿಯನ್ನು ಮಣಿಸಲು ಶಿವಮೊಗ್ಗದಲ್ಲಿ ತಂತ್ರ ಹೆಣೆಯಲಿದ್ದಾರೆ. ಇದು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ.

Madhu Bangarappa Manjunatha Gowda General Image

ವಿದಾನಸಭೆ ಕ್ಷೇತ್ರಗಳಿಗೆ ಉಸ್ತುವಾರಿ

ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ, ವಿಧಾನಸಭೆ ಕ್ಷೇತ್ರಗಳ ಪ್ರಚಾರದ ಜಾವಾಬ್ದಾರಿಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ವಹಿಸಲಾಗುತ್ತದೆ ಎಂದು ಆರ್.ಎಂ.ಮಂಜುನಾಥಗೌಡ ತಿಳಿಸಿದ್ದಾರೆ. ಇನ್ನು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಶಿವಮೊಗ್ಗ ಕ್ಷೇತ್ರದ ಗೆಲುವಿಗೆ ರಣತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 18, 2019

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

Leave a Comment