ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021
ಅಗತ್ಯ ವಸ್ತುಗಳ ಬೆಲೆ ಏರಿಕೆ, ಗಗನ ಮುಟ್ಟಿದ ಪೆಟ್ರೋಲ್, ಡೀಸೆಲ್ ದರ, ಜನವಿರೋಧಿ ಕಾಯ್ದೆಗಳಿಂದ ಜನರಿಗೆ ಬರೆ. ಇದೆಲ್ಲವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ವಿಭಿನ್ನ ಪ್ರತಿಭಟನೆ ನಡೆಸಲಾಯಿತು.
ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಗೋಪಿ ಸರ್ಕಲ್ವರೆಗೆ ಎತ್ತಿನ ಗಾಡಿ, ಟಾಂಗಾ, ಸೈಕಲ್ನಲ್ಲಿ ಮೆರವಣಿಗೆ ನಡೆಸಲಾಯಿತು.
ಅಡುಗೆ ಅನಿಲ ದರ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ, ವಿದ್ಯತ್ ದರವು ಏರಿಕೆಯಾಗಿದೆ, ಅಗತ್ಯ ವಸ್ತುಗಳ ಬೆಲೆಯು ದುಬಾರಿಯಾಗಿದೆ. ಈ ನಡುವೆ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಇವುಗಳನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಇದೆ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ‘ಕರೋನ ಲಾಕ್ಡೌನ್ನಿಂದಾಗಿ ಜನರಿಗೆ ಭಾರಿ ಹೊಡೆದ ಬಿದ್ದಿದೆ. ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಈ ಮಧ್ಯೆ ಬಿಜೆಪಿ ಸರ್ಕಾರ ಎಲ್ಲದಕ್ಕು ದರ ಏರಿಕೆ ಮಾಡಿ, ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಮಹಾನಗರ ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ, ಮಹಿಳಾ ಘಟಕ ರಾಜ್ಯಾಧ್ಯಕ್ಷ ಡಾ.ಪುಷ್ಪ ಅಮರನಾಥ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗಿರೀಶ್, ಜಿಲ್ಲಾ ವಕ್ತಾರರಾದ ಪಲ್ಲವಿ, ಪ್ರಮುಖರಾದ ಚಂದ್ರಭೂಪಾಲ್, ಪ್ರವೀಣ್ ಸೇರಿದಂತೆ ಹಲವರು ಇದ್ದರು.
ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422