ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಶಿವಮೊಗ್ಗ : ತಮಗೆ ತೊಂದರೆ (Problem) ಕೊಟ್ಟವರೆಲ್ಲ ಅನುಭವಿಸಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ನಾಲ್ಕು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.
ಈಶ್ವರಪ್ಪ ಏನೆಲ್ಲ ಹೇಳಿದರು?
ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ಸ್ಥಾಪಿಸಬೇಕು. ಮದರಸ, ಉರ್ದು ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚುತ್ತೀರ?
ಮೃತ್ಯುಂಜಯ ನದಿಗೆ ಗೋ ಮಾಂಸದ ತ್ಯಾಜ್ಯ ಹಾಕಲಾಗಿತ್ತು. ಈ ನೀರು ನೇತ್ರಾವತಿ ನದಿಗೆ ಸೇರಲಿದೆ. ಧರ್ಮಸ್ಥಳದಲ್ಲಿ ಪುಣ್ಯ ಸ್ನಾನವನ್ನು ಅಪವಿತ್ರಗೊಳಿಸುವ ಪ್ರಯತ್ನ ಇದು. ಗೋ ಹತ್ಯೆ ನಿಷೇಧವಿದ್ದರು ಇಷ್ಟೊಂದು ಗೋ ಮಾಂಸ ತ್ಯಾಜ್ಯ ಬಂದಿದ್ದು ಹೇಗೆ? ಹಿಂದು ಸಮಾಜಕ್ಕೆ ಮತ್ತು ನಂಬಿಕೆಗೆ ತೊಂದರೆ ಉಂಟು ಮಾಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರೋದೇಕೆ?
ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. ಇದು ಸಾಲ ಮಾಡಿ ಹಬ್ಬದೂಟ ಮಾಡಿದಂತಾಗಿದೆ. ಸಾಲ ಮಾಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ಎಲ್ಲದರ ದರ ಹೆಚ್ಚಳ ಮಾಡುತ್ತಿದ್ದಾರೆ. ಇನ್ನು ಹಲವು ಬೆಲೆ ಏರಿಕೆಗಳು ಬಾಕಿ ಇದೆ.
ವಿನಾಕಾರಣ ತಮ್ಮ ಮೇಲೆ ಆರೋಪ ಬಂದಾಗ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ತನಿಖೆ ಬಳಿಕ ನಿರ್ದೋಷಿ ಎಂಬ ತೀರ್ಪು ಬಂತು. ಸಂತೋಷ್ ಆತ್ಮಹತ್ಯೆ ಪ್ರಕರಣ ಸಂದರ್ಭ ತಮಗೆ ತೊಂದರೆ ಕೊಟ್ಟವರೆಲ್ಲ ಈಗಲು ಅನುಭವಿಸುತ್ತಿದ್ದಾರೆ. ಇನ್ಮುಂದೆಯು ಅನುಭವಿಸುತ್ತಾರೆ. ರಾಜಕಾರಣದಲ್ಲಿ ಮುಗಿಸಲು ಪ್ರಯತ್ನಿಸಿದ್ದರು. ಪ್ರಿಯಾಂಕ್ ಖರ್ಗೆ ವಿಚಾರದಲ್ಲಿ ಯಾರು ತಪ್ಪಿತಸ್ಥರಿದ್ದಾರೋ ಅವರ ಬಗ್ಗೆ ಭಗವಂತ ನೋಡಿಕೊಳ್ಳುತ್ತಾನೆ. ಸುಖಾಸುಮ್ಮನೆ ಆರೋಪ ಮಾಡಿದರೆ ಅನುಭವಿಸುತ್ತಾರೆ.
ರಾಷ್ಟ್ರಭಕ್ತರ ಬಳಗದ ಎಂ.ಶಂಕರ್, ಮಹಾಲಿಂಗಯ್ಯ ಶಾಸ್ತ್ರಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಹೆಚ್.ಟಿ.ಬಳಿಗಾರ್ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422