ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವರಾಗುವ ಯೋಗ ಲಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದು, ಪ್ರಮಾಣ ವಚನ ಸ್ವೀಕರಿಸಲು ಆಗಮಿಸುವಂತೆ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಸಚಿವರಾಗುತ್ತಿದ್ದಾರೆ. ಮುಖ್ಯಮಂತ್ರಿ ಅವರು ಕರೆ ಮಾಡಿ ಪ್ರಮಾಣ ವಚನ ಸ್ವೀಕಾರಕ್ಕೆ ಬರವಂತೆ ತಿಳಿಸಿದ್ದಾರೆ.
ಭಾವುಕರಾದ ಆರಗ
ಸಚಿವರಾಗುವ ವಿಚಾರ ತಿಳಿಯುತ್ತಿದ್ದಂತೆ ಭಾವುಕರಾದ ಶಾಸಕ ಆರಗ ಜ್ಞಾನೇಂದ್ರ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
‘ಈಗ ಐದು ನಿಮಿಷದ ಮೊದಲು ಭರವಸೆ ಹೋಗಿತ್ತು. ಆದರೆ ಮುಖ್ಯಮಂತ್ರಿ ಅವರು ಕರೆ ಮಾಡಿ, ಪ್ರತಿಜ್ಞಾವಿಧಿ ಸ್ವೀಕಾರಕ್ಕೆ ಬರುವಂತೆ ತಿಳಿಸಿದರು. ಕ್ಷಣಕಾಲ ಭಾವುಕನಾದೆ’ ಎಂದು ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ತಿಳಿಸಿದರು.
ಈಶ್ವರಪ್ಪಗೂ ಮಿನಿಸ್ಟರ್ ಯೋಗ
ಶಿವಮೊಗ್ಗ ನಗರದ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಚಿವರಾಗುವ ಯೋಗ ಲಭಿಸಿದೆ. ಇದರಿಂದ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವರಾಗುವ ಯೋಗ ಲಭಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200