ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA NEWS, 3 SEPTEMBER 2024 : ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ (Expelled) ಮಾಡಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಪಕ್ಷದ ಹಿರಿಯ ಮುಖಂಡರೂ ಆದ ವಿ.ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಲಲಿತಾ ನಾರಾಯಣಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಉಚ್ಛಾಟನೆ ಮಾಡಿದ್ದಾರೆ. ಚುನಾವಣೆಗೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿತ್ತು. ಆದರೆ ಪಕ್ಷದ ಆದೇಶ ಉಲ್ಲಂಘನೆ ಮಾಡಿದ್ದ ಮೂವರು ಸದಸ್ಯರು ಚುನಾವಣೆ ದಿನ ಗೈರಾಗಿದ್ದರು.

BJP-Office-Shimoga

ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಣಿ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ವಿ.ಕದಿರೇಶ್ ಅವರು ಪಕ್ಷದಿಂದ ಈ ಹಿಂದೆ ಭದ್ರಾವತಿ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು.

ಇದನ್ನೂ ಓದಿ » ಸೆಪ್ಟೆಂಬರ್‌ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment