SHIMOGA NEWS, 3 SEPTEMBER 2024 : ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ (Expelled) ಮಾಡಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಪಕ್ಷದ ಹಿರಿಯ ಮುಖಂಡರೂ ಆದ ವಿ.ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಲಲಿತಾ ನಾರಾಯಣಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಉಚ್ಛಾಟನೆ ಮಾಡಿದ್ದಾರೆ. ಚುನಾವಣೆಗೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿತ್ತು. ಆದರೆ ಪಕ್ಷದ ಆದೇಶ ಉಲ್ಲಂಘನೆ ಮಾಡಿದ್ದ ಮೂವರು ಸದಸ್ಯರು ಚುನಾವಣೆ ದಿನ ಗೈರಾಗಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಣಿ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ವಿ.ಕದಿರೇಶ್ ಅವರು ಪಕ್ಷದಿಂದ ಈ ಹಿಂದೆ ಭದ್ರಾವತಿ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು.
ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?
ಇದನ್ನೂ ಓದಿ:➤ ಮಗುವಿಗೆ ಔಷಧ ತರಲು ಬೈಕ್ನಲ್ಲಿ ಹೋಗಿದ್ದ ವ್ಯಕ್ತಿಗೆ ಟ್ರಾಕ್ಟರ್ ಡಿಕ್ಕಿ, ಗಂಭೀರ ಗಾಯ, ಹೇಗಾಯ್ತು ಘಟನೆ?