ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
POLITICAL NEWS : ಬಿಜೆಪಿ ರಾಜ್ಯ ಕಮಿಟಿಗೆ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ರಾಜ್ಯಾಧ್ಯಕ್ಷರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶಿಸಿದ್ದಾರೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ಪ್ರಮುಖ ಸ್ಥಾನ ನೀಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಾರಿಗೆಲ್ಲ ಯಾವ ಸ್ಥಾನ ಲಭಿಸಿದೆ?
ರಾಜ್ಯ ಉಪಾಧ್ಯಕ್ಷ : ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಪೈಕಿ ಮಾಜಿ ಸಚಿವ, ಸಾಗರದ ಮಾಜಿ ಶಾಸಕ ಹರತಾಳು ಹಾಲಪ್ಪ ಸ್ಥಾನ ಪಡೆದಿದ್ದಾರೆ.
ರಾಜ್ಯ ಕಾರ್ಯದರ್ಶಿ : ಹತ್ತು ಮಂದಿ ರಾಜ್ಯ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯ, ಶಿವಮೊಗ್ಗದ ಡಿ.ಎಸ್.ಅರುಣ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ : ಭದ್ರಾವತಿಯ ಸಿ.ಮಂಜುಳಾ ಅವರನ್ನು ಬಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆಯಾಗಿ ನೇಮಿಸಲಾಗಿದೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದರು. ಕುವೆಂಪು ವಿವಿ ಸಿಂಡಿಕೇಟ್ ಸದಸ್ಯೆಯಾಗಿದ್ದರು. ಅಲ್ಲದೆ ಪಕ್ಷದ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.
ಇದನ್ನೂ ಓದಿ – ತುಘಲಕ್‌ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್