ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ, ಸುದ್ದಿಗೋಷ್ಠಿಯಲ್ಲಿ 3 ಪ್ರಮುಖ ಪಾಯಿಂಟ್‌ ಪ್ರಸ್ತಾಪ, ಏನೇನದು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 4 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ (Dinner Meeting) ಮೂಲಕ ಸಿದ್ದರಾಮಯ್ಯ ರಾಜಕೀಯ ಧಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಚಿವ ಸತೀಶ್‌ ಜಾರಕಿಹೊಳಿ ಮನೆಯಲ್ಲಿನ ಡಿನ್ನರ್‌ ಮೀಟಿಂಗ್‌ ಕುರಿತು ಮಾತನಾಡಿದರು.

BJP-President-BY-Vijayendra-press-meet-in-Shimoga

ವಿಜಯೇಂದ್ರ ಹೇಳಿದ 3 ಪ್ರಮುಖ ಪಾಯಿಂಟ್‌

ಕಾಂಗ್ರೆಸ್‌ ಪಕ್ಷದಲ್ಲಿ ಸಿದ್ಧ ವರ್ಸಸ್‌ ಸಿದ್ಧʼ

FATAFAT - #f1f1f1ಬಜೆಟ್ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ನಲ್ಲಿ ಚರ್ಚೆ ಆಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ ಮೂಲಕ ರಾಜಕೀಯ ಧಾಳ ಉರುಳಿಸಿದ್ದಾರೆ. ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಸಿದ್ಧರಿಲ್ಲ. ಅದೇ ರೀತಿ ಕಾಂಗ್ರೆಸ್‌ನಲ್ಲಿರುವ ವಿರೋಧಿ ಬಣ ಸಿದ್ಧರಾಮಯ್ಯ ಅವರನ್ನು ಸಿಎಂ ಸ್ಥಾನದಲ್ಲಿ ಉಳಿಸಲು ಸಿದ್ಧರಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧ ವರ್ಸಸ್ ಸಿದ್ಧ ಸ್ಥಿತಿ ಇದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ತೆರಳಿರುವ ಸಂದರ್ಭ, ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಆಯೋಜಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು. 

BY Vijayendra Speaks about dinner politics at satish jarakiholi house

‘ಪ್ರಿಯಾಂಕ್‌ ಖರ್ಗೆ ಅವರೆ ಸಿದ್ದರಾಮಯ್ಯರನ್ನ ನಂಬಬೇಡಿ’

FATAFAT - #f1f1f1ಡಿಸೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ ಸಚಿವ ಕೆ.ಜಿ.ಜಾರ್ಜ್‌ ನಿರ್ದೋಷಿಯಾಗಿದ್ದಾರೆ. ಅದೆ ರೀತಿ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪ್ರಾಮಾಣಿಕರಾಗಿದ್ದರೆ ಸಿಬಿಐ ತನಿಖೆಗೆ ವಹಿಸಲಿ. ಕಾಂಗ್ರೆಸ್‌ ಪಕ್ಷದಲ್ಲಿಯೇ ಪ್ರಿಯಾಂಕ್‌ ಖರ್ಗೆ ವಿರೋಧಿಗಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರನ್ನು ಈ ವಿಚಾರದಲ್ಲಿ ಅವರು ನಂಬುವುದು ಬೇಡ. ಸಿಬಿಐ ತನಿಖೆಯಾದರೆ ಸಚಿನ್ ಪಾಂಚಾಳ್ ಕುಟುಂಬಕ್ಕು ನ್ಯಾಯ ದೊರೆಯಲಿದೆ. ಪ್ರಾಮಾಣಿಕರಾಗಿದ್ದರೆ ಪ್ರಿಯಾಂಕ್ ಖರ್ಗೆ ಅವರಿಗು ನ್ಯಾಯ ದೊರೆಯಲಿದೆ ಎಂದ ವಿಜಯೇಂದ್ರ ಹೇಳಿದರು. 

BY Vijayendra Speaks about dinner politics at satish jarakiholi house

ಮಹಿಳೆಯರಿಗೆ ಉಚಿತ, ಪುರುಷರಿಗೆ ದರ ಹೆಚ್ಚಳ ಖಚಿತ

FATAFAT - #f1f1f1ಶಕ್ತಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೆ ಸಾರಿಗೆ ಸಂಸ್ಥೆಗಳು ಸಾವಿರಾರು ಕೋಟಿ ರೂ. ನಷ್ಟದಲ್ಲಿವೆ. ಸಂಸ್ಥೆಗಳನ್ನು ಮುಚ್ಚುವ ದುಸ್ಥಿತಿ ಇದೆ. ಈಗ ಶೇ.15ರಷ್ಟು ದರ ಹೆಚ್ಚಳ ಮಾಡಿದ್ದಾರೆ. ಮಹಿಳೆಯರಿಗೆ ಉಚಿತ, ಪುರುಷರಿಗೆ ದರ ಹೆಚ್ಚಳ ಖಚಿತ ಎಂಬಂತಾಗಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವುದೆ ಗ್ಯಾರಂಟಿ ಯೋಜನೆ ಎಂಬ ನಮ್ಮ ಆರೋಪ ನಿಜವಾಗಿದೆ. ಹಿಮಾಚಲ ಪ್ರದೇಶ ಸರ್ಕಾರ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹಾಗಾಗಿ ಕರ್ನಾಟಕದ ಆರ್ಥಿಕ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದಾಗಿದೆ. ಕಾಂಗ್ರೆಸ್‌ ಸಚಿವರು, ಶಾಸಕರೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು

BY Vijayendra Speaks about dinner politics at satish jarakiholi house

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಸ್‌.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment