ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 9ನೇ ಬಜೆಟ್ (Budget) ‘ವಿಕಸಿತ ಭಾರತ’ದ ಗುರಿ ತಲುಪಲು ಪೂರಕವಾದ ಅತ್ಯುತ್ತಮ ಮತ್ತು ಕ್ರಾಂತಿಕಾರಿ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ಲಾಘಿಸಿದ್ದಾರೆ.
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಈ ಬಜೆಟ್ ಜನಪ್ರಿಯತೆಗಿಂತ ಜನಹಿತಕ್ಕೆ ಆದ್ಯತೆ ನೀಡಿದೆ ಎಂದರು.
ವಿತ್ತೀಯ ಕೊರತೆಯನ್ನು 4.4% ಕ್ಕೆ ಇಳಿಸಿರುವುದು ಮತ್ತು ಮೂಲಭೂತ ಸೌಕರ್ಯಗಳಿಗೆ 12.2 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದು ದೇಶದ ಅಭಿವೃದ್ಧಿಗೆ ದಿಟ್ಟ ಹೆಜ್ಜೆಯಾಗಿದೆ.
ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದು ಸ್ವಾಗತಾರ್ಹ.
ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಹಿಳೆಯರು ಉದ್ಯಮ ಆರಂಭಿಸಲು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.
16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕದ ತೆರಿಗೆ ಪಾಲು 3.65% ರಿಂದ 4.13% ಕ್ಕ್ಕೆ ಹೆಚ್ಚಳವಾಗಿದೆ. ಇದರಿಂದ ರಾಜ್ಯಕ್ಕೆ ಸುಮಾರು 63,000 ಕೋಟಿ ರೂ. ಅನುದಾನ ಬರಲಿದೆ ಎಂದು ವಿವರಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರವನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ಲಿಂಗಾಯತ ಧರ್ಮವನ್ನು ಒಡೆಯಲು ಯತ್ನಿಸಿದಂತೆ ಈಗ ರಾಜ್ಯಗಳನ್ನು ಕೇಂದ್ರದ ವಿರುದ್ಧ ಎತ್ತುಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ಸಿದ್ದರಾಮಯ್ಯ ಅವರು ದಕ್ಷಿಣ ಭಾರತದ ನಾಯಕನಾಗಲು ಹೊರಟಿದ್ದಾರೆ. ಮೊದಲು ಈ ವಿಭಜಿತ ಮನಸ್ಥಿತಿಯಿಂದ ಹೊರಬರಬೇಕು. ರಾಜ್ಯದ ಹಣಕಾಸಿನ ಸ್ಥಿತಿ ಹದಗೆಟ್ಟಿದ್ದರೂ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯವನ್ನು ಕುಡುಕರ ರಾಜ್ಯ ಮಾಡಲು ಹೊರಟಿರುವ ಸಿಎಂ, ಮೊದಲು ಅಭಿವೃದ್ಧಿಯ ಬಗ್ಗೆ ಚಿಂತಿಸಲಿ ಎಂದು ಅವರು ಟೀಕಿಸಿದರು.
ಇದನ್ನೂ ಓದಿ – ‘ಅಂತ್ಯಕ್ರಿಯೆಗು ಮೊದಲೇ ಪ್ರತಿಕ್ರಿಯೆಯೇ ಅನುಮಾನಕ್ಕೆ ಕಾರಣʼ, ಶಿವಮೊಗ್ಗದಲ್ಲಿ ವಿಜಯೇಂದ್ರ ಆರೋಪ

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





