ಶಿವಮೊಗ್ಗ : ನಗರದಲ್ಲಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ ಭಾರಿ ಮಳೆಯಿಂದ (Rain) ಅಡ್ಡಿಯಾಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ವೇಳೆ ಗುಡುಗು, ಜೋರು ಗಾಳಿ ಸಹಿತ ಮಳೆ ಸುರಿಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುರಿವ ಮಳೆಯಲ್ಲು ಭಾಷಣ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ಮೆರವಣಿಗೆ ನಡೆಯಿತು. ಗೋಪಿ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭವಾಗುತ್ತಿದ್ದಂತೆ ಮಳೆ ಸುರಿಯಿತು.
ಸುರಿವ ಮಳೆಯಲ್ಲು ಭಾಷಣ
ಜೋರು ಮಳೆಯಲ್ಲೂ (Rain) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಷಣ ಮುಂದುವರೆಸಿದರು. ವೇದಿಕೆ ಮುಂಭಾಗ ಕಾರ್ಯಕರ್ತರು ಕೂಡ ಮಳೆಯಲ್ಲೆ ಕುಳಿತು ಭಾಷಣ ಆಲಿಸಿದರು.
ವಿಜಯೇಂದ್ರ ಭಾಷಣದ ಪ್ರಮುಖ ಪಾಯಿಂಟ್ಸ್
ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಿಂದೂಗಳ ಅಪಮಾನ ಕಾಂಗ್ರೆಸ್ ಸರ್ಕಾರದ ಮನಸ್ಥಿತಿ. ಸರ್ಕಾರದ ಈ ವರ್ತನೆ ಖಂಡಿಸಿ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದೆ. ಸರ್ಕಾರದ ವರ್ತನೆ ಬದಲಾಗುವವರೆಗೆ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ.
ಸರ್ಕಾರ ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡಿರುವುದರಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೃಷಿ ಚಟುವಟಿಕೆಗೆ ಟ್ರಾಕ್ಟರ್, ಟಿಲ್ಲರ್ ಬಳಸುವ ರೈತರಿಗೆ ಬರೆ ಹಾಕಿದಂತಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ.
ಹಾಲಿನ ದರ ಹೆಚ್ಚಳ ಮಾಡಿ ಬಡ ಜನರು ತಮ್ಮ ಮಕ್ಕಳಿಗೂ ಹಾಲು ನೀಡದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯ ಸರ್ಕಾರ ಜನರ ಪ್ರಾಣ ಹಿಂಡುತ್ತಿದೆ. ಗ್ಯಾರಂಟಿಗಳ ಆಧಾರದಲ್ಲಿ ಅಧಿಕಾರಕ್ಕೆ ಬಂದು ಈಗ ಗ್ಯಾರಂಟಿ ಈಡೇರಿಕೆಗೆ ಜನರ ಮೇಲೆ ಹೊರೆ ಹಾಕಲಾಗುತ್ತಿದೆ.
ಸರ್ಕಾರಿ ನೌಕರರಿಗೆ ನಿಗದಿತ ದಿನಾಂಕದಂದು ವೇತನ ನೀಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದೆ. ಬೊಕ್ಕಸ ತುಂಬಿಸಲು ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಜನರಿಗೆ ಇಲ್ಲದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಜನರ ಪಾಲಿಗೆ ದುಸ್ವಪ್ನವಾಗಿದೆ.
ಮುಸ್ಲಿಂ ಧರ್ಮದ ಹೆಣ್ಣು ಮಕ್ಕಳು ವಿವಾಹವಾದರೆ ಅವರಿಗೆ ಸರ್ಕಾರ ಸಹಾಯಧನ ನೀಡುತ್ತದೆ. ಆದರೆ ಈ ಯೋಜನೆ ಹಿಂದು ಹೆಣ್ಣು ಮಕ್ಕಳಿಗೆ ಅನ್ವಯವಾಗುವುದಿಲ್ಲ. ಹಿಂದುಗಳಲ್ಲಿ ಬಡ ಕುಟುಂಬದ ಹೆಣ್ಣು ಮಕ್ಕಳಿಲ್ಲವೇ? ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ. 4 ಮೀಸಲಾತಿ ನೀಡುವ ಔಚಿತ್ಯವೇನಿತ್ತು? ಇದು ಮುಸ್ಲಿಂ ಓಲೈಕೆ ಪರಮಾವಧಿಯಾಗಿದೆ.

ಭಜದ ಮೇಲೆ ಹೊತ್ತು ಕುಣಿದರು
ಇನ್ನು, ಸುರಿವ ಮಳೆಯಲ್ಲಿ ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದರು. ಗೋಪಿ ವೃತ್ತದಲ್ಲಿ ವಿಜಯೇಂದ್ರ ಅವರನ್ನು ಹೆಗಲ ಮೇಲೆ ಹೊತ್ತ ಕಾರ್ಯಕರ್ತರು, ಮಳೆಯಲ್ಲೇ ಹೆಜ್ಜೆ ಹಾಕಿದರು.
ಇದನ್ನೂ ಓದಿ » ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ
ಅಧಿಕಾರಕ್ಕೆ ಬಂದ ದಿನದಿಂದಲೂ ಕಾಂಗ್ರೆಸ್ ನಾಯಕರು ಒಂದಿಲ್ಲೊಂದು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹನಿಟ್ರ್ಯಾಪ್ ನಡೆಯುತ್ತಿರುವ ಬಗ್ಗೆ ಆ ಪಕ್ಷದ ಸಚಿವರೇ ಅಧಿವೇಶನದಲ್ಲಿ ಹೇಳಿದ್ದಾರೆ. ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.
– ಎಸ್.ಎನ್.ಚನ್ನಬಸಪ್ಪ, ಶಾಸಕ
ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮುಂತಾದವರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200