ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಸಿದ್ಧತೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ವಾರ್ ರೂಂ ಆರಂಭಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಹಳ್ಳಿ ಹಳ್ಳಿಯನ್ನು ತಲುಪಲು ಬಿಜೆಪಿ ಯೋಜಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ವಾರ್ ರೂಂಗೆ ಚಾಲನೆ ನೀಡಿದರು.
ನಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಮಟ್ಟದಲ್ಲಿ ಆರಂಭವಾಗಿರುವ ವಾರ್ ರೂಂ ಮತ್ತು ಸಾಮಾಜಿಕ ಜಾಲತಾಣದ ತಂಡಗಳು ಹೋಬಳಿ ಮಟ್ಟಕ್ಕೂ ವಿಸ್ತರಣೆ ಆಗಬೇಕು. ಬಿಜೆಪಿ ಮತ್ತು ಸರ್ಕಾರದ ಯೋಜನೆಗಳ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ತಲುಪುವಂತೆ ಮಾಡಬೇಕು ಎಂದರು.
ರೈತ ಪರವಾದ ಕಾಯ್ದೆಗಳ ಕುರಿತು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು. ಅಧಿಕಾರವಿಲ್ಲದೆ ಚಡಪಡಿಸುತ್ತಿದ್ದಾರೆ. ಹಾಗಾಗಿ ಕಾಯ್ದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಅಂತಾ ಸಂಸದ ರಾಘವೇಂದ್ರ ಹೇಳಿದರು.
ಜಿಲ್ಲಾಧ್ಯಕ್ಷ ಮೇಘರಾಜ್, ಶಾಸಕ ಕುಮಾರ ಬಂಗಾರಪ್ಪ, ಆರ್ಯವೈಶ್ಯ ಅಭಿವೃದ್ಧಿ ನಿಗಮನ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಪ್ರಮುಖರಾದ ಗಿರೀಶ್ ಪಟೇಲ್, ದತ್ತಾತ್ರಿ ಸೇರಿ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]