ಶಿವಮೊಗ್ಗ ಲೋಕಸಭೆ ಚುನಾವಣೆ, ಗೆಲುವಿನ ಲೆಕ್ಕಾಚಾರ ಶುರು, ರಾಘವೇಂದ್ರ ಅಭಿಪ್ರಾಯವೇನು? ಮಧು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MAY 2024

ELECTION NEWS : ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದೆ. ಅಭ್ಯರ್ಥಿಗಳು, ಕಾರ್ಯಕರ್ತರು ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ಇನ್ನೊಂದೆಡೆ ಸೋಲು, ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. (Election Result)

ಚುನಾವಣೆಯಲ್ಲಿ ಗೆಲ್ಲೋದು ಯಾರು?

ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ‘ಮತದಾರರ ಮನಸು ವಿಶಾಲ. ಅಷ್ಟೇ ವಿಶಾಲವಾದ ಅಂತರದಲ್ಲಿ ಗೆಲವು ಕೊಡಲಿದ್ದಾರೆ. ಕಳೆದ ವಾರಿ ಎರಡೂವರೆ ಲಕ್ಷ ಅಂತರದಲ್ಲಿ ಗೆಲುವಾಗಿತ್ತು. ಐದು ವರ್ಷ ಕೆಲಸ ಮಾಡಿದ್ದೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಲಸ ಆಗಿದೆ. ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ. ಮೋದಿ ಗ್ಯಾರಂಟಿ, ದೇಶದ ರಕ್ಷಣೆ, ಅಭಿವೃದ್ಧಿ ದೃಷ್ಟಿಯಿಂದ ಜನರು ಹೆಚ್ಚಿನ ಬೆಂಬಲ ನೀಡಿದ್ದಾರೆʼ ಎಂದರು.

ಕಲ್ಲಹಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ, ‘ಜನರ ವಿಶ್ವಾಸ ನೋಡಿದರೆ ಮೋಸ ಮಾಡುವುದಿಲ್ಲ ಅನಿಸುತ್ತದೆ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಸಹಕಾರ ಬೇಕಿತ್ತು‌. ಗ್ಯಾರಂಟಿ ಯೋಜನೆ ಮೂಲಕ ಸರ್ಕಾರ ಸಹಕಾರ ನೀಡಿತ್ತು. ಈಗ ಸಹಕಾರ ಪಡೆದವರು ಋಣ ತೀರಿಸುತ್ತಾರೆ ಎಂಬ ನಂಬಿಕೆ ಇದೆ. ಮತ ಚಲಾಯಿಸಿದ 10 ಮಂದಿಯಲ್ಲಿ 7 ಮಂದಿ ಕಾಂಗ್ರೆಸ್ ಪರ ಮಾತನಾಡುತ್ತಿದ್ದಾರೆ. ಮಹಿಳೆಯರ ಪೈಕಿ 10ರಲ್ಲಿ 9 ಮಂದಿ ನಮ್ಮ ಪರವಾಗಿ ಮಾತನಾಡುತ್ತಿದ್ದಾರೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರು, ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್‌ ರೂಂ ಸೀಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment