ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MAY 2024
ELECTION NEWS : ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿದೆ. ಅಭ್ಯರ್ಥಿಗಳು, ಕಾರ್ಯಕರ್ತರು ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ಇನ್ನೊಂದೆಡೆ ಸೋಲು, ಗೆಲುವಿನ ಲೆಕ್ಕಾಚಾರಗಳು ಶುರುವಾಗಿದೆ. (Election Result)
ಚುನಾವಣೆಯಲ್ಲಿ ಗೆಲ್ಲೋದು ಯಾರು?
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ‘ಮತದಾರರ ಮನಸು ವಿಶಾಲ. ಅಷ್ಟೇ ವಿಶಾಲವಾದ ಅಂತರದಲ್ಲಿ ಗೆಲವು ಕೊಡಲಿದ್ದಾರೆ. ಕಳೆದ ವಾರಿ ಎರಡೂವರೆ ಲಕ್ಷ ಅಂತರದಲ್ಲಿ ಗೆಲುವಾಗಿತ್ತು. ಐದು ವರ್ಷ ಕೆಲಸ ಮಾಡಿದ್ದೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಲಸ ಆಗಿದೆ. ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ. ಮೋದಿ ಗ್ಯಾರಂಟಿ, ದೇಶದ ರಕ್ಷಣೆ, ಅಭಿವೃದ್ಧಿ ದೃಷ್ಟಿಯಿಂದ ಜನರು ಹೆಚ್ಚಿನ ಬೆಂಬಲ ನೀಡಿದ್ದಾರೆʼ ಎಂದರು.
ಕಲ್ಲಹಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ, ‘ಜನರ ವಿಶ್ವಾಸ ನೋಡಿದರೆ ಮೋಸ ಮಾಡುವುದಿಲ್ಲ ಅನಿಸುತ್ತದೆ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಸಹಕಾರ ಬೇಕಿತ್ತು. ಗ್ಯಾರಂಟಿ ಯೋಜನೆ ಮೂಲಕ ಸರ್ಕಾರ ಸಹಕಾರ ನೀಡಿತ್ತು. ಈಗ ಸಹಕಾರ ಪಡೆದವರು ಋಣ ತೀರಿಸುತ್ತಾರೆ ಎಂಬ ನಂಬಿಕೆ ಇದೆ. ಮತ ಚಲಾಯಿಸಿದ 10 ಮಂದಿಯಲ್ಲಿ 7 ಮಂದಿ ಕಾಂಗ್ರೆಸ್ ಪರ ಮಾತನಾಡುತ್ತಿದ್ದಾರೆ. ಮಹಿಳೆಯರ ಪೈಕಿ 10ರಲ್ಲಿ 9 ಮಂದಿ ನಮ್ಮ ಪರವಾಗಿ ಮಾತನಾಡುತ್ತಿದ್ದಾರೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರು, ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಸೀಲ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





