ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021
ಪೆಟ್ರೋಲ್ ಬೆಲೆ ಏರಿಕೆ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ಭಕ್ತರಿಗೆ ಪ್ರತ್ಯೇಕ ಪೆಟ್ರೋಲ್ ಬಂಕ್ ಸ್ಥಾಪಿಸಿ ದುಬಾರಿ ದರದಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲಿ. ಜೀವನ ನಿರ್ವಹಣೆಗೂ ಕಷ್ಟಪಡುತ್ತಿರುವ ಸಾಮಾನ್ಯ ಜನರಿಗೆ ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ದರ ಕಡಿತಗೊಳಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಪುಷ್ಪಾ ಅಮರನಾಥ್ ಅವರು ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಬದುಕು ನಡೆಸಲು ಕಷ್ಟಪಡುತ್ತಿದ್ದಾರೆ. ಇಂತಹ ಸಮಯದಲ್ಲೂ ಬಿಜೆಪಿ ಭಕ್ತರು ಬೆಲೆ ಏರಿಕೆ ದೇಶದ ಹಿತಕ್ಕಾಗಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತವರು ಬೇಕಿದ್ದರೆ ಸಾವಿರ ರೂ.ಗೆ ಪೆಟ್ರೋಲ್ ಹಾಕಿಸಿಕೊಳ್ಳಲಿ, ಐದು ಸಾವಿರ ಕೊಟ್ಟು ಸಿಲಿಂಡರ್ ಖರೀದಿಸಲಿ. ಆದರೆ ಸಾಮಾನ್ಯ ಜನರಿಗೆ ದರ ಕಡಿಮೆ ಮಾಡಿ ಎಂದರು.
ಇದನ್ನೂ ಓದಿ | ಪೆಟ್ರೋಲ್, ಡೀಸಲ್ ಬೆಲೆ ಏರಿಕೆ, ಗೋಪಿ ಸರ್ಕಲ್ವರೆಗೆ ಎತ್ತಿನ ಗಾಡಿ, ಟಾಂಗಾದಲ್ಲಿ ಮೆರವಣಿಗೆ
ಬೆಲೆ ಏರಿಕೆ ಖಂಡಿಸಿ ಈ ಹಿಂದೆ ಸ್ಮೃತಿ ಇರಾನಿಯವರು ಬೀದಿಯಲ್ಲಿ ಬಿದ್ದು ಹೊರಳಾಡಿದ್ದರು. ಈಗೇಕೆ ಅವರು ಧ್ವನಿ ಎತ್ತುತ್ತಿಲ್ಲ ಎಂದರು. ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಜಿಡಿಪಿ ಕುಸಿದಿದೆ. ಸುಳ್ಳು ಲೆಕ್ಕ ಕೊಟ್ಟು ಸಮರ್ಥಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಕತ್ತಲಾಗಿದೆ. ವಿದ್ಯಾವಂತರು ನಿರುದ್ಯೋಗಿಗಳಾಗಿದ್ದಾರೆ ಎಂದರು.
ಈಶ್ವರಪ್ಪ ರಾಜೀನಾಮೆ ನೀಡಲಿ
ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ, ನಿಷ್ಪಕ್ಷಪಾತ ತನಿಖೆಯಾಗಲಿ. ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರವಿಲ್ಲದೆ ಇಷ್ಟೊಂದು ಸ್ಪೋಟಕ ಬಂದಿದ್ದು ಹೇಗೆ. ಈ ಪ್ರಕರಣದ ಹೊಣೆ ಹೊತ್ತು ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಹಿಳಾ ಘಟಕದ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422