ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021
ಉಪಚುನಾವಣೆಗೆ ಪಕ್ಷ ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣೆ ದಿನಾಂಕ ನಿಗದಿಪಡಿಸುತ್ತಿದ್ದಂತೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನ ಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಉಪ ಚುನಾವಣೆಗೆ ರಾಜ್ಯಾಧ್ಯಕ್ಷರು ಉಸ್ತುವಾರಿಗಳನ್ನ ನೇಮಿಸಿದ್ದಾರೆ ಎಂದು ತಿಳಿಸಿದರು.
ಉಪ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಅಭ್ಯರ್ಥಿಗಳನ್ನು ಕೂಡ ಘೋಷಣೆ ಮಾಡಲಾಗುವುದು. ಈ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು.
ಎಲ್ಲರೂ ಕರೋನ ಲಸಿಕೆ ಹಾಕಿಸಿಕೊಳ್ಳಬೇಕು
ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಇವತ್ತಿನಿಂದ ಮತ್ತೆ ಲಸಿಕೆ ನೀಡುವ ಕಾರ್ಯ ಆರಂಭವಾಗಿದ್ದು, ನಾನು ಲಸಿಕೆ ಹಾಕಿಸಿಕೊಳ್ಳುವೆ. ಸಾರ್ವಜನಿಕರು ಕೂಡ ಲಸಿಕೆ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, 45 ವರ್ಷ ಮೇಲ್ಪಟ್ಟು ಆರೋಗ್ಯ ತೊಂದರೆ ಇರುವರೂ ಕೂಡ ಲಸಿಕೆ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಇದಕ್ಕೂ ಮೊದಲು ಶಿವಮೊಗ್ಗದ ವೀರಶೈವ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422