ಶಿವಮೊಗ್ಗದಲ್ಲಿ ಮತ್ತೆ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ ಕದನ, 15 ವರ್ಷದಲ್ಲಿ ಏನೇನಾಯ್ತು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MARCH 2024

ELECTION NEWS : ಬಂಗಾರಪ್ಪ ಕುಟುಂಬ ವರ್ಸಸ್‌ ಯಡಿಯೂರಪ್ಪ ಕುಟುಂಬ ಕದನಕ್ಕೆ ಶಿವಮೊಗ್ಗ ಕ್ಷೇತ್ರ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಈ ಮೊದಲು ಅಪ್ಪನ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಈಗ ಮಗನನ್ನು ಎದುರಿಸಲು ಸಜ್ಜಾಗಬೇಕಿದೆ.

ಅಪ್ಪ ಆಯ್ತು, ಈಗ ಮಗನ ವಿರುದ್ಧ ಸ್ಪರ್ಧೆ

ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಇದೇನು ಮೊದಲ ಚುನಾವಣೆಯಲ್ಲ. 2014ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಕ್ಷದಿಂದ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸಿದ್ದರು. ಆಗ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಯಡಿಯೂರಪ್ಪ 6.06 ಲಕ್ಷ ಮತ ಪಡೆದಿದ್ದರು. ಗೀತಾ ಶಿವರಾಜ್‌ ಕುಮಾರ್‌ ಅವರು 2.40 ಲಕ್ಷ ಮತಗಳನ್ನು ಪಡೆದಿದ್ದರು. 2024ರಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಅಭ್ಯರ್ಥಿಯಾಗುವುದು ಖಚಿತ. ಹಾಗಾಗಿ ಹತ್ತು ವರ್ಷದ ಬಳಿಕ ಗೀತಾ ಶಿವರಾಜ್‌ ಕುಮಾರ್‌ ಅವರು ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಎದುರಿಸಬೇಕಾಗಿದೆ.

ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ

ಲೋಕಸಭೆ ಚುನಾವಣೆ ಅಖಾಡದಲ್ಲಿ ಬಂಗಾರಪ್ಪ ಕುಟುಂಬ ಮತ್ತು ಯಡಿಯೂರಪ್ಪ ಕುಟುಂಬದ ಮಧ್ಯೆ ಕಳೆದ 15 ವರ್ಷದಿಂದ ಜಿದ್ದಾಜಿದ್ದಿ ನಡೆಯುತ್ತಿದೆ. ಈ ಅವಧಿಯಲ್ಲಿ ನಾಲ್ಕು ಬಾರಿ ಚುನಾವಣೆ ನಡೆದಿದ್ದು, ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರೆ ಮೇಲುಗೈ ಸಾಧಿಸಿದ್ದಾರೆ.

point-12009ರಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್‌ನಿಂದ ಎಸ್.ಬಂಗಾರಪ್ಪ ಸ್ಪರ್ಧಿಸಿದ್ದರು. ರಾಘವೇಂದ್ರ 4.82 ಲಕ್ಷ ಮತ ಪಡೆದಿದ್ದರು. ಬಂಗಾರಪ್ಪ 4.29 ಲಕ್ಷ ಮತ ಪಡೆದಿದ್ದರು. 52 ಸಾವಿರ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು ಸಾಧಿಸಿ, ಚೊಚ್ಚಲ ಬಾರಿ ಲೋಕಸಭೆ ಪ್ರವೇಶಿಸಿದ್ದರು.

point-22014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್‌ನಿಂದ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸಿದ್ದರು. ಯಡಿಯೂರಪ್ಪ ಅವರು 6,06,216 ಮತ ಪಡೆದಿದ್ದರು. ಗೀತಾ ಶಿವರಾಜ್‌ ಕುಮಾರ್‌ 2,40,636 ಮತ ಪಡೆದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು 2,42,911 ಮತ ಪಡೆದಿದ್ದರು. ಹಾಗಾಗಿ ಗೀತಾ ಶಿವರಾಜ್‌ ಕುಮಾರ್‌ ಅವರು ಮೂರನೆ ಸ್ಥಾನ ಪಡೆದಿದ್ದರು.

point-32018ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ ಬೆಂಬಲದೊಂದಿಗೆ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಸ್ಪರ್ಧೆ ಮಾಡಿದ್ದರು. ಆ ಚುನಾವಣೆಯಲ್ಲಿ ರಾಘವೇಂದ್ರ 5,43,306 ಮತ ಗಳಿಸಿದ್ದರು. ಮಧು ಬಂಗಾರಪ್ಪ 4,91,158 ಮತ ಪಡೆದಿದ್ದರು. 52 ಸಾವಿರ ಮತಗಳ ಅಂತರದಿಂದ ರಾಘವೇಂದ್ರ ಗೆಲುವು ಸಾಧಿಸಿದ್ದರು.

point-42019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ ಬೆಂಬಲದೊಂದಿಗೆ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಸ್ಪರ್ಧೆ ಮಾಡಿದ್ದರು. ಆ ಚುನಾವಣೆಯಲ್ಲಿ ರಾಘವೇಂದ್ರ 7,29,872 ಮತ ಗಳಿಸಿದ್ದರು. ಮಧು ಬಂಗಾರಪ್ಪ 5,06,512 ಮತ ಪಡೆದಿದ್ದರು. 2.23 ಲಕ್ಷ ಮತಗಳ ಅಂತರದಿಂದ ರಾಘವೇಂದ್ರ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ – ಲೋಕಸಭೆ ಚುನಾವಣೆಗೆ ಗೀತಾ, ಶಿವಮೊಗ್ಗದಲ್ಲಿ ನಟ ಶಿವರಾಜ್‌ ಕುಮಾರ್‌ ಹೇಳಿದ್ದೇನು? ಇಲ್ಲಿದೆ 3 ಪ್ರಮುಖ ಪಾಯಿಂಟ್

ಕಳೆದ ನಾಲ್ಕು ಲೋಕಸಭೆ ಚುನಾವಣೆಯಲ್ಲಿದ್ದ ಕದನ ಕುತೂಹಲ 2024ರ ಚುನಾವಣೆಯಲ್ಲಿಯು ಸೃಷ್ಟಿಯಾಗಿದೆ. ಮೇಲ್ನೋಟದ ರಾಜಕೀಯ ಲೆಕ್ಕಾಚರಕ್ಕಿಂತಲು ಒಳ ಪೆಟ್ಟು, ಒಳ ಪಟ್ಟುಗಳು ಕುತೂಹಲ ಹೆಚ್ಚಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment