ಮಧು ಬಂಗಾರಪ್ಪ ಗೆಲುವು ನಿಶ್ಚಿತ ಅಂದ್ರು ಬೇಳೂರು ಗೋಪಾಲಕೃಷ್ಣ, ಅಂತರ ಎಷ್ಟು? ಗೆಲುವಿಗೆ ಅವರು ಕೊಟ್ಟ ಕಾರಣಗಳೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 6 ಮೇ 2019

ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲುವು ಖಚಿತ ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಗೆಲ್ಲುವುದು ನಿಶ್ಚಿತು. 18 ರಿಂದ 20 ಸಾವಿರ ಮತಗಳ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆ ಸಂದರ್ಭ, ಯಡಿಯೂರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಎಷ್ಟೋ ಕಡೆ ಮತಗಟ್ಟೆಗಳಲ್ಲಿ ಬಿಜೆಪಿ ಬೂತನ್ನೇ ಸ್ಥಾಪಿಸಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗನನ್ನು ಸೋಲಿಸಬೇಕು ಎಂಬದು ನಿರ್ಧಾರವಾಗಿದೆ ಅಂತಾ ಲೇವಡಿ ಮಾಡಿದರು.

ಹಿಡಿತ ಕಳೆದಕೊಳ್ಳುತ್ತಿದ್ದಾರೆ ಯಡಿಯೂರಪ್ಪ

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ಹರಿಹಾಯ್ದರು. ಯಡಿಯೂರಪ್ಪ ಹೋರಾಟಗಾರ. ಆದರೆ ಪಕ್ಷದ ಮೇಲೆ ಅವರಿಗಿದ್ದ ಹಿಡಿತವನ್ನು ಕಳೆದುಕೊಳ್ಳುತ್ತಿದ್ದಾರೆ. ಮೋದಿ ಹೆಸರು ಹೇಳಿಕೊಂಡು ಪ್ರಚಾರ ನಡೆಸುತ್ತಿರುವುದೇ ಇದಕ್ಕೆ ಸಾಕ್ಷಿ ಅಂತಾ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಕೇಂದ್ರದಲ್ಲಿ ಯಡಿಯೂರಪ್ಪ ಅವರ ಪ್ರಭಾವವಿಲ್ಲ. ಯಾಕೆಂದರೆ ಯಡಿಯೂರಪ್ಪ ಅವರು ದೆಹಲಿಗೆ ಹೋದರೂ, ಅವರಿಗೆ ಭಾಷೆ ಬರುವುದಿಲ್ಲ. ಇನ್ನು, ದಹೆಲಿಗೆ ಹೋಗಲು ಆಗುತ್ತಿಲ್ಲ. ಹಾಗಾಗಿ ಯಡಿಯೂರಪ್ಪ ಮತ್ತು ಶೋಭಾ ಮೇಡಂ ಅವರದ್ದು ಏನೂ ನಡೆಯುತ್ತಿಲ್ಲ. ದಿನ ಕಳೆದಂತೆ ಬಿಜೆಪಿಯೊಳಗೆ ಸಂತೋಷ್ ಜೀ ಪ್ರಭಾವಗೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆ ಫಲಿತಂಶದ ಬಳಿಕ ಎಲ್ಲವೂ ಗೊತ್ತಾಗುತ್ತದೆ ಎಂದರು.

ಇನ್ನು, ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಮುಹೂರ್ತ ಇಡುವುದನ್ನು ಪ್ರಸ್ತಾಪಿಸಿದ ಬೇಳೂರು ಗೋಪಾಲಕೃಷ್ಣ, ಈವರೆಗೂ ಎಲ್ಲ ಹಬ್ಬಗಳನ್ನು ನೋಡಾಯ್ತು. ಈಗ ರಂಜಾನ್ ಹಬ್ಬ ಒಂದು ಬಾಕಿ ಇದೆ. ರಂಜಾನ್ ಹಬ್ಬ ಆದ ಬಳಿಕ ಸರ್ಕಾರ ಮಾಡುತ್ತೇವೆ ಅಂತಾ ಬಿಜೆಪಿ ಮುಖಂಡರು ಹೇಳಬಹುದೇನೋ ಎಂದು ವ್ಯಂಗ್ಯ ಮಾಡಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment