‘ಸಾಲ ಮನ್ನಾ ಹೆಸರಲ್ಲಿ ಸಿಎಂ ಆರು ತಿಂಗಳಿಂದ ಪ್ರಚಾರ ಪಡೀತಿದ್ದಾರೆ, ಆದ್ರೆ ಸಾಲ ಮಾತ್ರ ಮನ್ನಾ ಆಗಿಲ್ಲ’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಅಂತಾ ಹೇಳುತ್ತ, ಆರು ತಿಂಗಳಾಗಿದೆ. ಸಾಲ ಮನ್ನಾ ಹೆಸರಲ್ಲಿ ಪ್ರಚಾರ ಪಡೆಯುತ್ತಿರುವ ಸಿಎಂ, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಂತಾ ಯಡಿಯೂರಪ್ಪ ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಆರು ತಿಂಗಳಾದರೂ ರೈತರ ಸಾಲ ಮನ್ನಾ ಆಗಿಲ್ಲ. ಹಾಗಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ. ರಾಷ್ಟ್ರೀಕೃತ ಬ್ಯಾಂಕ್’ಗಳಿಗೆ ಸರ್ಕಾರ, ಸಾಲ ಮನ್ನಾದ ಹಣ ಪಾವತಿ ಮಾಡದೆ ಇದ್ದರೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡುವುದಿಲ್ಲ ಎಂದರು.

FOUR LAKH VIEWS copy

ಪ್ರಸಾದಕ್ಕೆ ಅನುಮತಿ ಸರಿಯಲ್ಲ

ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ಹಂಚಲು ಸರ್ಕಾರದ ಅನುಮತಿ ಪಡೆಯಬೇಕು ಅನ್ನುವುದು ಸರಿಯಾದ ಕ್ರಮವಲ್ಲ. ಚಾಮರಾಜನಗರದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣದಲ್ಲಿ, ಅಪಾರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ಆ ನೆಪದಲ್ಲಿ ಪ್ರಸಾದ ಹಂಚುವಾಗ ಸರ್ಕಾರದ ಅನುಮತಿ ಪಡೆಯಬೇಕು ಅನ್ನುವುದು ಸರಿಯಲ್ಲ ಅಂತಾ ಯಡಿಯೂರಪ್ಪ ಸರ್ಕಾರದ ನಡೆ ವಿರೋಧಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment