SHIVAMOGGA LIVE NEWS | 3 NOVEMBER 2023
SHIMOGA : ಹಲವರು ನಾಯಕರನ್ನು ಹೈಕಮಾಂಡ್ (High Command) ದೆಹಲಿಗೆ ಕರೆಸಿಕೊಂಡಿದ್ದು ನಾನಾ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ. ಅದರಲ್ಲಿ ವಿಶೇಷವೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ವತಿಯಿಂದ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತಿದೆ. ವಿಐಎಸ್ಎಲ್ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ತಾವು ನ.5ರ ಬಳಿಕ ಅಧ್ಯಯನ ತಂಡದೊಂದಿಗೆ ಸೇರಿಕೊಳ್ಳುವುದಾಗಿ ತಿಳಿಸಿದರು.
ಲೋಕಸಭೆ ಚುನಾವಣೆಗೆ ತಮ್ಮದೆ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಹೆಚ್ಚು ಸೀಟ್ ಗೆಲ್ಲುವ ಕಡೆಗೆ ಗಮನ ವಹಿಸುತ್ತೇವೆ. ಇನ್ನು, ಶೀಘ್ರದಲ್ಲಿಯೇ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200