ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಬಿಜೆಪಿಯಲ್ಲಿ ತಮ್ಮನ್ನು ಸೈಡ್ ಲೈನ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಇದೆ ಮೊದಲ ಭಾರಿ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖಂಡರಾರೂ ನನ್ನನ್ನು ಸೈಡ್ ಲೈನ್ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪಕ್ಷದಲ್ಲಿ ತಮ್ಮನ್ನು ಸೈಡ್ ಲೈನ್ ಮಾಡಲಾಗಿದೆ ಎಂಬುದು ಸುಳ್ಳು. ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಯಂ ರಾಜೀನಾಮೆ ನೀಡಿದ್ದೇನೆ ಹೊರತು, ಯಾರ ಒತ್ತಡಕ್ಕೂ ಮಣಿದಿಲ್ಲ ಎಂದರು.
ಸಿದ್ದರಾಮಯ್ಯ ನಾಲಗೆ ಹದ್ದುಬಸ್ತಿನಟ್ಟುಕಳ್ಳಲಿ
ಇತ್ತೀಚೆಗೆ ಆರ್.ಎಸ್.ಎಸ್, ಪ್ರಧಾನಿ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತು ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರ ಸ್ಥಾನಕ್ಕೆ ಈ ಹೇಳಿಕೆಗಳು ಶೋಭೆ ತರುವುದಿಲ್ಲ. ಇನ್ನಾದರೂ ನಾಲಗೆ ಹದ್ದುಬಸ್ತಿನಲ್ಲಿ ಇಟ್ಟುಕೊಂಡು ಗೌರವದಿಂದ ಮಾತನಾಡಲಿ. ಇಲ್ಲವಾದರೆ ಜನರೆ ತೆಕ್ಕ ಪಾಠ ಕಲಿಸಲಿದ್ದಾರೆ ಎಚ್ಚರಿಕೆ ನೀಡಿದರು.
‘ನಾನೊಂದು ಕಡೆ, ಸಿಎಂ ಒಂದು ಕಡೆ’
ಸಿಂದಗಿ ಮತ್ತು ಹಾನಗಲ್ ಉಪ ಚುನಾವಣಾ ಕಣದಲ್ಲಿ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅ.20 ಮತ್ತು 21ರಂದು ಸಿಂದಗಿ, ಅ.22 ಮತ್ತು 23 ರಂದು ಹಾನಗಲ್’ನಲ್ಲಿ ಪ್ರಚಾರ ಕಾರ್ಯ ನಡೆಸಲಾಗುತ್ತದೆ. ಅಗತ್ಯ ಬಿದ್ದರೆ ಹಾನಗಲ್’ನಲ್ಲಿ ಹೆಚ್ಚುವರಿಯಾಗಿ ಇನ್ನೊಂದು ದಿನ ಪ್ರಚಾರ ಮಾಡುತ್ತೇನೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಒಂದು ಕಡೆ, ನಾನು ಒಂದು ಕಡೆಯಿಂದ ಪ್ರಚಾರ ನಡೆಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.
ಅಲ್ಪಸಂಖ್ಯಾತರಿಗೆ ವಂಚಿಸಿದ ಉದಾಹರಣೆ ತೋರಿಸಿ
ಪ್ರಧಾನಿ ಮೋದಿ ಸರ್ಕಾರ, ನನ್ನ ಸರ್ಕಾರ ಹಾಗೂ ಈಗಿನ ಸರ್ಕಾರ ಯಾರಿಗೂ ಅನ್ಯಾಯ ಮಾಡಿಲ್ಲ. ಅಲ್ಪಸಂಖ್ಯಾತರಿಗೆ ವಂಚನೆ ಮಾಡಿದ ಒಂದು ಉದಾಹರಣೆ ಇದ್ದರೆ ನನಗೆ ಕೊಡಿ. ಅವರಿಗೊಂದು ಇವರಿಗೊಂದು ಯಾವತ್ತು ಮಾಡಿಲ್ಲ. ಭೇದ ಮಾಡದೆ ಎಲ್ಲರಿಗೂ ಒಂದೇ ತರ ನೋಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಿದೆ. ಹಾಗಾಗಿ ಯಾವುದೆ ಅಲ್ಪಸಂಖ್ಯಾತರು ಬೇಸರ ಮಾಡಿಕೊಳ್ಳುವ ವಿಚಾರವೇ ಬರಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200