ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021
ಮುಖ್ಯಮಂತ್ರಿ ಸ್ಥಾನ ತೊರೆದ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸ್ವಾಗತ ಕೋರಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಡಿಯೂರಪ್ಪಗೆ ಭರ್ಜರಿ ಸ್ವಾಗತ
ವಿನೋಬನಗರದಲ್ಲಿರುವ ನಿವಾಸಕ್ಕೆ ಯಡಿಯೂರಪ್ಪ ಅವರು ಸಂಜೆ ಆಗಮಿಸಿದರು. ಈ ವೇಳೆ ಪಟಾಕಿ ಸಿಡಿಸಿ, ಹೂ ಗುಚ್ಛ ನೀಡಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಯಡಿಯೂರಪ್ಪ ಅವರಿಗೆ ರಾಖಿ ಕಟ್ಟಲಾಯಿತು.
ಕಾರ್ಯಕರ್ತರೊಂದಿಗೆ ಸಭೆ
ವಿನೋಬನಗರದ ನಿವಾಸಕ್ಕೆ ಮುಂದೆ ಕಾರ್ಯಕರ್ತರ ಸಭೆ ನಡೆಸಿದ ಯಡಿಯೂರಪ್ಪ ಅವರು, ಇಡೀ ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಮತ್ತು ನಗರ ಮಾದರಿ ಕ್ಷೇತ್ರವಾಗಿದೆ. ಇನ್ನೊಂದು ಆರು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು, ವಿಮಾನ ಹಾರಾಟ ಪ್ರಾರಂಭವಾಗಲಿದೆ. ಕೈಗಾರಿಕೆಗಳು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಇದರಿಂದ ತಮ್ಮ ಕನಸು ನನಸಾದಂತಾಗಲಿದೆ ಎಂದು ತಿಳಿಸಿದರು.
ಇನ್ನೊಂದು ವರ್ಷದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ. ಬಳಿಕ ವಿಧಾನಸಭೆ ಕ್ಷೇತ್ರವಾರು ಪ್ರವಾಸ ಕೈಗೊಳ್ಳುತ್ತೇನೆ. ಮೊದಲಿಗೆ ತಮ್ಮ ಶಾಸಕರು ಇರುವ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ಬಳಿಕ ನಮ್ಮ ನಮ್ಮ ಶಾಸಕರು ಇರದ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಅಲ್ಲೆಲ್ಲ ಬಿಜೆಪಿ ಗೆಲ್ಲಿಸುವ ಪ್ರಯತ್ನ ಮಾಡುತ್ತೇನೆ. ಸ್ವಂತ ಶಕ್ತಿ ಮೇಲೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ ಎಂದರು.
ತಮ್ಮ ಮನೆ ಬಾಗಿಲು ಯಾವಾಗಲೂ ತೆಗೆದಿರುತ್ತದೆ. ಜನರು ಯಾವುದೇ ಸಮಸ್ಯೆ ಇದ್ದರೂ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಬರಬಹುದು ಎಂದರು .
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಪದ್ಮನಾಭ ಭಟ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200