ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020
ಏಳು ತಿಂಗಳ ಬಳಿಕ ತವರು ಕ್ಷೇತ್ರ ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಇವತ್ತು ಹಲವು ಖಾಸಗಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿ ಆಗಲಿದ್ದಾರೆ.
ಶಿಕಾರಿಪುರದ ಹೆಲಿಪ್ಯಾಡ್ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸ್ವಾಗತಿಸಿದರು.
ಮಾದರಿ ಕ್ಷೇತ್ರ ಮಾಡುತ್ತೇವೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುತ್ತೇವೆ. ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಮೂರು ದಿನ ಕ್ಷೇತ್ರದಲ್ಲೇ ಇದ್ದು ಪ್ರವಾಸ ಮಾಡುತ್ತೇನೆ ಎಂದರು.
ಉಪ ಚುನಾವಣೆ ಗೆಲವು ಪಕ್ಕಾ
ಶಿರಾ ಹಾಗೂ ಆರ್ ಆರ್ ನಗರ ಎರಡು ಕ್ಷೇತ್ರದಲ್ಲಿ ಬಿಜೆಪಿ ಪರವಾದ ಒಲವು ಇದೆ. ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಎರಡು ದಿನದಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಯಡಿಯೂರಪ್ಪ ತಿಳಿಸಿದರು.
ಉತ್ತರ ಕರ್ನಾಟಕ ಪ್ರವಾಹ
ಉತ್ತರ ಕರ್ನಾಟಕದ ಪ್ರವಾಹ ವಿಚಾರವನ್ನು ಪ್ರಧಾನಿ ಅವರ ಜೊತೆ ಮಾತನಾಡಿದ್ದು, ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಹೆಚ್ಚಿನ ಪರಿಹಾರ ಕೊಡುವ ನಿರೀಕ್ಷೆ ಇದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422