ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021
ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪದ ಹಿನ್ನೆಲೆ ಯುವ ಕಾಂಗ್ರೆಸ್ ಸಾಗರ ಬ್ಲಾಕ್ ಅಧ್ಯಕ್ಷರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಪ್ರದೀಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಬೇಳೂರು ಆವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಮಾಡುತ್ತಿದ್ದಾರೆ. ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಕ್ಷಕ್ಕೆ ತೀವ್ರ ಮುಜುಗರ
ಅಶೋಕ್ ಬೇಳೂರು ಅಮಾನತು ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರೊಬ್ಬರು ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪಕ್ಷದೊಳಗಿನ ಹಲವರ ಕಣ್ಣು ಕೆಂಪಗಾಗಿಸಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ರಾಜ್ಯ ಪ್ರಮುಖರಿಗೆ ದೂರು ನೀಡಿದ್ದಾರೆ. ಅದರ ಪರಿಣಾಮವಾಗಿ ಅವರನ್ನು ಅಮಾನತು ಮಾಡಲಾಗಿದೆ.
ಕಾರಣ ಕೇಳಿ ನೊಟೀಸ್
ಘಟನೆ ಸಂಬಂಧ ಅಶೋಕ್ ಬೇಳೂರು ಅವರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ಅವರು ಕಾರಣ ಕೇಳಿ ನೋಟೀಸ್ ನೋಡಿದ್ದರು. ಇದಕ್ಕೆ ಉತ್ತರ ನೀಡಿರುವ ಅಶೋಕ್ ಬೇಳೂರು ಅವರು, ತಾವು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಜನಪ್ರತಿನಿಧಿಯಾಗಿ ತಾನು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಯಿತು. ರೋಟರಿ ಕ್ಲಬ್ ಸೇರಿದಂತೆ ಸೇರಿದಂತೆ ವಿವಿಧ ಸಂಘಟನಗಳು, ಗ್ರಾಮಸ್ಥರು ಕಾರ್ಯಕ್ರಮ ಆಯೋಜಿಸಿದ್ದವು. ತಾವು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಎಂದು ಉತ್ತರಿಸಿದ್ದಾರೆ.
ರಾಜ್ಯ ನಾಯಕರೊಂದಿಗೆ ಚರ್ಚೆ
ಇನ್ನು, ಘಟನೆಯನ್ನು ರಾಜ್ಯ ಮತ್ತು ರಾಷ್ಟ್ರೀಯ ಮುಖಂಡರು ಗಂಭೀರವಾಗಿ ಪರಿಗಣಿಸಿದ್ದಾರೆ. ‘ರಾಜ್ಯ, ರಾಷ್ಟ್ರಮಟ್ಟದ ಪ್ರಮುಖರು ಈ ಬಗ್ಗೆ ಚರ್ಚಿಸಿದ್ದಾರೆ. ಪ್ರಮುಖರು ಮಾಹಿತಿ ಕೇಳಿದ್ದಾರೆ. ಎಲ್ಲವನ್ನು ವಿವರವಾಗಿ ತಿಳಿಸಿದ್ದೇನೆ’ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಮಾನತು ವಿಚಾರ ಪಕ್ಷದಲ್ಲಿ ಪರ, ವಿರೋಧ ಚರ್ಚೆಗೆ ಕಾರಣವಾಗಿದೆ.