ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ವಿನೋಬನಗರದಲ್ಲಿ ಪ್ರತಿಭಟನಾಕಾರರ ಬಂಧನ

Published On : ಫೆಬ್ರವರಿ 7, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 7 FEBRUARY 2024

SHIMOGA : ತೆರಿಗೆ ಹಂಚಿಕೆ, ಬರ ಪರಿಹಾರ ವಿತರಣೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಯುವ ಕಾಂಗ್ರೆಸ್‌ ಕಾರ್ಯಕರ್ತರು, ವಿನೋಬನಗರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ರಾಜ್ಯ ಸರ್ಕಾರದ ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಶಕ್ಕೆ

ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನಿ ಕಾರ್ಯದರ್ಶಿ ಎಂ.ಪ್ರವೀಣ್‌, ಜಿಲ್ಲಾಧ್ಯಕ್ಷ ಹೆಚ್‌.ಪಿ.ಗಿರೀಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್‌, ಬಿ.ಲೋಕೇಶ್‌, ಎಸ್.ಕುಮರೇಶ್‌, ಹೆಚ್.ಪಾಲಾಕ್ಷಿ, ರಾಹುಲ್‌, ಸಂದೀಪ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 7, 2024

Leave a Comment