ಶಿವಮೊಗ್ಗ ಲೈವ್.ಕಾಂ | SHIMOGA NEWS | 3 NOVEMBER 2020
ಮೂರು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟು, ಸ್ವಪಕ್ಷೀಯರು ಮತ್ತು ಮೈತ್ರಿ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು ಬಿಜೆಪಿ ಸೇರುವುದಾಗಿ ಒಪ್ಪಿಕೊಂಡಿದ್ದಾರೆ.
ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಕೊಠಡಿಯಲ್ಲಿ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಬಿಜೆಪಿ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ. ಇನ್ನೂ ನಾವು ಬಿಜೆಪಿಗೆ ಸೇರ್ಪಡೆಯಾಗಿಲ್ಲ. ಆದರೆ ಸೇರುವುದು ಖಚಿತ. ಯಾವುದೇ ಸ್ಥಾನಮಾನ, ಬೇಡಿಕೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆಯಾಗುತ್ತಿಲ್ಲ ಎಂದು ತಿಳಿಸಿದರು.
ಇನ್ನು, ಸ್ಥಾಯಿ ಸಮಿತಿ ಗೊಂದಲದ ಕುರಿತು ಮಾತನಾಡಿದ ಅವರು, ಸ್ವಪಕ್ಷ ಜೆಡಿಎಸ್, ಮೈತ್ರಿ ಪಕ್ಷ ಕಾಂಗ್ರೆಸ್ ಸದಸ್ಯರು ಈ ಹಿಂದೆ ಎರಡು ಸ್ಥಾಯಿ ಸಮಿತಿಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದ್ದರು. ಆಗ ಎಲ್ಲವೂ ಸರಿ ಇತ್ತು. ಈಗ ನಾನು ಒಂದು ಹೆಚ್ಚಿಗೆ ಸ್ಥಾನ ಬಿಟ್ಟುಕೊಟ್ಟಿದ್ದಕ್ಕೆ ಕಿತಾಪತಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರ ಕಿರು ಸಂದರ್ಶನದ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]