ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.16ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕುವೆಂಪು ರಸ್ತೆ, ಶಾರದಮ್ಮ ಕಾಂಪೌಂಡ್, ಶಿವಶಂಕರ ಗ್ಯಾರೇಜ್, ಚರ್ಚ್ ರಸ್ತೆ, ಶರಾವತಿ ನಗರ, ಹೊಸಮನೆ ಮುಖ್ಯರಸ್ತೆ, ಹಂದಿಗೊಲ್ಲರ ಬೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.