SHIVAMOGGA LIVE NEWS | 14 SEPTEMBER 2023
SHIMOGA : ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.15ರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ.
ಇದನ್ನೂ ಓದಿ – ʼಇದೇ ರೀತಿಯಾದರೆ ಕುಡಿಯುವ ನೀರು, ರೈತರ ಬೆಳೆಗೆ ಸಂಕಷ್ಟ, ರಾಜ್ಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ಅಗತ್ಯʼ
ಬಿ.ಹೆಚ್ ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ತಿಲಕ್ ನಗರ, ಸರ್.ಎಂ.ವಿ ರಸ್ತೆ, ಬಾಲ್ರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪುಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್ ಬಡಾವಣೆ, ಟ್ಯಾಂಕ್ ಬೌಂಡ್ ರಸ್ತೆ ಹಾಗೂ ಮೀನಾಕ್ಷಿ ಭವನದ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್, ಇನ್ಮುಂದೆ ನಿಮ್ಮದೆ ಚಾನಲ್ ಮಾಡಬಹುದು