ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 MARCH 2024
SHIMOGA : ಮಾ.18ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಬೃಹತ್ ಪೆಂಡಾಲ್, 2 ಲಕ್ಷ ಜನ
ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಬೃಹತ್ ಪೆಂಡಾಲ್ ಹಾಕಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಪೆಂಡಾಲ್ ಮತ್ತು ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಅಂದು ಸುಮಾರು 2 ಲಕ್ಷ ಜನರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಹಾಗೂ ಜನರು ಭಾಗಿಯಾಗುವ ನಿರೀಕ್ಷೆ ಇದೆ.
ಮೋದಿ ಸಾಗುವ ರೋಡ್ ಕ್ಲೀನ್ ಕ್ಲೀನ್
ಇನ್ನು, ಶಿವಮೊಗ್ಗಕ್ಕೆ ವಿಮಾನದಲ್ಲಿ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಳಿಕ ರಸ್ತೆ ಮೂಲಕ ಅಲ್ಲಮಪ್ರಭು ಮೈದಾನಕ್ಕೆ ತಲುಪಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಸಾಗುವ ರಸ್ತೆಯಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಿಂದ ಎಂಆರ್ಎಸ್ ಸರ್ಕಲ್ವರೆಗಿನ ರಸ್ತೆ ಮತ್ತು ಡಿವೈಡರ್ಗಳನ್ನು ಕ್ಲೀನ್ ಮಾಡಿಸಲಾಗುತ್ತಿದೆ. ಇನ್ನು, ಸಹ್ಯಾದ್ರಿ ಕಾಲೇಜು, ವಿದ್ಯಾನಗರ ರಸ್ತೆಯಲ್ಲು ಸ್ವಚ್ಛತಾ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್, ಎಫ್ಐಆರ್ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?
ಶಿವಮೊಗ್ಗ ಲೈವ್.ಕಾಂ