SHIVAMOGGA LIVE NEWS | PROTEST | 08 ಮೇ 2022
ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೆಲವು ಬಾರ್ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಬೇಕೆಂದು ಆಗ್ರಹಿಸಿದರು.
ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಐತಿಹಾಸಿಕ ವೀರಾಂಜನೇಯಸ್ವಾಮಿ ದೇವಸ್ಥಾನಕ್ಕೆ ಭಕ್ತಾದಿಗಳು ತೆರಳಲು ರಸ್ತೆಯೇ ಇಲ್ಲದಂತಾಗಿದೆ. ಕೂಡಲೆ ರಸ್ತೆ ನಿರ್ಮಿಸಬೇಕು. ಭದ್ರಾವತಿ ನಗರಸಭೆ ವ್ಯಾಪ್ತಿಯ 32ನೇ ವಾರ್ಡ್ನಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ರಸ್ತೆ, ಚರಂಡಿಗಳೂ ಇಲ್ಲ. ಸಮರ್ಪಕ ರಸ್ತೆ ಚರಂಡಿ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಜನ್ನಾಪುರದ ವಾಣಿಜ್ಯ ರಸ್ತೆಯಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು. ವಾಹನದಟ್ಟಣೆ ಇರುವ ರಸ್ತೆಗಳಲ್ಲಿ ಹಂಪ್ಗಳನ್ನು ನಿರ್ಮಿಸಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ – ಅನಂದಪುರ ಬಳಿ ಕೆರೆಗೆ ಉರುಳಿದ ಟಿಪ್ಪರ್ ಲಾರಿ, ಅದೃಷ್ಟವಶಾತ್ ತಪ್ಪಿತು ದುರಂತ