ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020
ಗ್ರಾಮ ಪಂಚಾಯಿತಿ ಪರವಾನಗಿ ಇಲ್ಲದೆ, ಗ್ರಾಮಸ್ಥರ ವಿರೋಧದ ನಡುಗೆ ಮದ್ಯದ ಅಂಗಡಿ ತೆರೆಯಲಾಗಿದೆ. ಕೂಡಲೇ ಆ ಅಂಗಡಿಯನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿ, ಶಿವಮೊಗ್ಗದಲ್ಲಿರುವ ಅಬಕಾರಿ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಗುತ್ತಿದೆ.
ಸಾಗರ ತಾಲೂಕಿನ ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಗಳು ಧರಣಿ ನಡೆಸುತ್ತಿದ್ದಾರೆ. ರಂಗನಾಥ ಕಾಲೋನಿಯಲ್ಲಿ ಇತ್ತೀಚೆಗೆ ಮದ್ಯದ ಅಂಗಡಿಯೊಂದನ್ನು ತೆರೆಯಲಾಗಿದೆ. ಇದಕ್ಕೆ ಗ್ರಾಮ ಪಂಚಾಯಿತಿ ಅನುಮತಿ ಇಲ್ಲ. ಮತ್ತೊಂದೆಡೆ ಇಲ್ಲಿನ ನಿವಾಸಿಗಳು ಕೂಡ ಮದ್ಯದ ಅಂಗಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಿದ್ದೂ ಅಂಗಡಿ ಓಪನ್ ಮಾಡಲಾಗಿದೆ ಎಂದು ಧರಣಿನಿರತರು ಆರೋಪಿಸಿದರು.
ಮದ್ಯದ ಅಂಗಡಿಯ ಸಮೀಪದಲ್ಲಿ ಶಾಲೆ, ಕಾಲೇಜು, ದೇವಸ್ಥಾನಗಳಿವೆ. ಹೆಚ್ಚು ಜನ ಸಂಚಾರ ಇರಲಿದೆ. ಮಹಿಳೆಯರು ಮತ್ತು ಮಕ್ಕಳು ಓಡಾಡುವ ಮಾರ್ಗದಲ್ಲಿ ಮದ್ಯದ ಅಂಗಡಿ ತೆರೆಯಲಾಗಿದೆ. ಇದನ್ನು ಕೂಡಲೇ ಬಂದ್ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]