SHIVAMOGGA LIVE NEWS | 2 SEPTEMBER 2023
BHADRAVATHI : ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಅಡುಗೆ ಸಹಾಯಕಿಯ (Kitchen Helper) ಕುಟುಂಬದವರು ಭದ್ರಾವತಿ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು.
ಗ್ರಾಮದ ಎಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು ರೂಪಾ ಅವರಿಗೆ ಬೆದರಿಕೆ ಒಡ್ಡಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕೂಡಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಇದನ್ನೂ ಓದಿ – ಮುಪ್ಪಾನೆ ಲಾಂಚ್ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್ ನಿಲ್ಲಲು ಕಾರಣವೇನು?
ಡಿವೈಎಸ್ಪಿ ನಾಗರಾಜ್, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬಿಇಒ ಎ.ಕೆ.ನಾಗೇಂದ್ರಪ್ಪ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಬಾಲಕೃಷ್ಣ, ಸುರೇಶ್, ಸುಧೀಂದ್ರ, ಮಂಜುನಾಥ್, ಚನ್ನಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.