ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021
ರಾಹುಲ್ ಗಾಂಧಿ ಮತ್ತು ಪ್ರಗತಿಪರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಭಾವಿಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ಬೆಂಕಿ ಹಚ್ಚಿದರು.
ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಭಾವಚಿತ್ರ ಹಿಡಿದು ಘೋಷಣೆಗಳನ್ನು ಕೂಗಿದಿರು.
ಚಪ್ಪಲಿ ಏಟು, ಬೆಂಕಿ ಹಚ್ಚಿ ಆಕ್ರೋಶ
ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಳಿಕ ಬೆಂಕಿ ಹಚ್ಚಿದ ಆಕ್ರೋಶ ವ್ಯಕ್ತಪಡಿಸಿದರು.
ಇದೆ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಜೆಪಿ ಮತ್ತು ಮುಖ್ಯಮಂತ್ರಿ ಅವರು ಕ್ರಮ ಕೈಗೊಳ್ಳಬೇಕು. ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಳ್ಳಬೇಕು. ಅಲ್ಲದೆ ರಾಹುಲ್ ಗಾಂಧಿ ಮತ್ತು ಪ್ರಗತಿಪರರ ಕುರಿತು ಯತ್ನಾಳ್ ಹೇಳಿಕೆ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಅಲ್ಲದೆ ಯತ್ನಾಳ್ ಮನೆಗೆ ನುಗ್ಗಿ ಚಪ್ಪಲಿ ಏಟು ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯತ್ನಾಳ್ ಹೇಳಿದ್ದೇನು?
ಅಫ್ಘಾನಿಸ್ತಾನದ ವಿಚಾರಲ್ಲಿ ಪ್ರಗತಿಪರರು ಮೌನ ವಹಿಸಿದ್ದಾರೆ. ಅವರೆಲ್ಲ ಅಫ್ಘಾನಿಸ್ತಾನದವರಿಗೆ ಹುಟ್ಟಿದ್ದಾರಾ ಎಂದು ಬಸನಗೌಡ ಪಾಟೀಲ್ ಯತ್ನಾಳ ಪ್ರಶ್ನಿಸಿದರು. ಅಲ್ಲದೆ ರಾಹುಲ್ ಗಾಂಧಿ ಅವರು ಹಿಂದೂನಾ? ಕ್ರಿಶ್ಚಿಯನ್ನಾ? ಎಂದು ಅವರ ಹುಟ್ಟಿನ ಕುರಿತು ಯತ್ನಾಳ್ ಪ್ರಶ್ನಿಸಿದ್ದರು. ಇದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200