SHIVAMOGGA LIVE NEWS | 1 FEBRUARY 2023
SHIMOGA | ಸೋಗಾನೆಯಲ್ಲಿನ ವಿಮಾನ ನಿಲ್ದಾಣದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಈ ನಡುವೆ ಏರ್ ಪೋರ್ಟ್ ಹೆಸರಿನ (Airport Name) ವಿಚಾರವಾಗಿ ಮತ್ತೆ ಆಗ್ರಹ, ಪ್ರತಿಭಟನೆಗಳು ಆರಂಭವಾಗಿವೆ.
ಡಾ. ಬಿ.ಆರ್. ಅಂಬೇಡ್ಕರ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು (Airport Name) ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಆಗ್ರಹಿಸಿ ರಾಜ್ಯ ಚಾಣಕ್ಯ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರು ಇಡಬೇಕು. ವಿಮಾನ ನಿಲ್ದಾಣ ಆವರಣದಲ್ಲಿ ಡಾ. ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆ ನಿರ್ಮಿಸಬೇಕು. ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್, ಬಕ್ ಪಾರ್ಕಿಂಗ್ ಮತ್ತು ಇತರೆ ಟೆಂಡರ್ ಗಳನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ನೀಡಬೇಕು ಎಂದು ಆಗ್ರಹಿಸಿದರು.
ಶಾಂತವೇರಿ ಗೋಪಾಲಗೌಡ
ದೇಶಕ್ಕೆ ಮಾದರಿಯಾದ ರಾಜಕಾರಣಿ ಶಾಂತವೇರಿ ಗೋಪಾಲಗೌಡ ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿಮಾನ ನಿಲ್ದಾಣಕ್ಕೆ ಹಲವರ ಹೆಸರು ಇಡುವಂತೆ ಆಗ್ರಹ ಕೇಳಿ ಬಂದಿದೆ. ಅವರೆಲ್ಲರ ಹೆಸರುಗಳು ರಾಷ್ಟ್ರವ್ಯಾಪಿ ಜನಜನಿತವಾಗಿದೆ. ಶಾಂತಿವೇರಿ ಗೋಪಾಲಗೌಡ ಅವರು ಹೆಸರನ್ನು ಇಡುವುದೆ ಸೂಕ್ತ ಎಂದು ಒತ್ತಾಯಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ