ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 14 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯ ಮಂತ್ರಿ ಎಸ್.ಬಂಗಾರಪ್ಪ ಹೆಸರು ನಾಮಕಾರಣ ಮಾಡುವಂತೆ ಆಗ್ರಹಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈ ಸಂಬಂಧ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವಾನಂದ ರಾಣಿ ಅವರಿಗೆ ಮನವಿ ಸಲ್ಲಿಸಿದರು.
ಇದೆ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇ ಇಡಗೋಡು, ಎಸ್.ಬಂಗಾರಪ್ಪ ಅವರು ಶೋಷಿತರು, ಹಿಂದುಳಿದ ವರ್ಗಗಳ ನಾಯಕರಾಗಿದ್ದರು. ಬಗರ್ಹುಕುಂ ಸಾಗುವಳಿ ದಾರರಿಗೆ ಜಮೀನು ಕೊಡಿಸಲು ಸಾಕಷ್ಟು ಶ್ರಮಿಸಿದ್ದರು. ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡಿ ರೈತಪರ ನಾಯಕ ಎನಿಸಿಕೊಂಡಿದ್ದರು. ಗ್ರಾಮೀಣ ಕೃಪಾಂಕ ಜಾರಿಗೆ ತರುವ ಮೂಲಕ ಗ್ರಾಮಾಂತರ ಯುವಕರು ಸರ್ಕಾರಿ ಉದ್ಯೋಗ ಪಡೆಯಲು ಸಹಕಾರಿಯಾಗಿದ್ದರು. ಹೀಗಾಗಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತ ಎಂದು ಒತ್ತಾಯಿಸಿದರು.
ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಶಿವಕುಮಾರ, ಮುಖಂಡರಾದ ನಿಂಗಪ್ಪ, ಲಿಂಗರಾಜ, ಟೇಕರಾಜ, ಈಶ್ವರಪ್ಪ, ಚೇತನ್, ಸದಾಶಿವ, ಪ್ರಮುಖರಾದ ಕೆ. ಧರ್ಮಪ್ಪ, ಶಶಿಕುಮಾರ, ಎಚ್.ಕೆರಿಯಪ್ಪ, ಎಚ್.ಮೋಹನ, ಸೋಮಶೇಖರ ಇತರರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200