ಶಿವಮೊಗ್ಗ ಲೈವ್.ಕಾಂ | BHADRAVATHI | 17 ಫೆಬ್ರವರಿ 2020

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ. 2017ರಲ್ಲಿ ಆರಂಭವಾದ ಕಾಮಗಾರಿ ನಿಧಾನಗತಿಯಲ್ಲಿದ್ದು, ಹೆಚ್ಚುವರಿಯಾಗಿ 5.50 ಕೋಟಿ ರೂ. ಅಗತ್ಯವಿದೆ. ಇದನ್ನು ಬಿಡುಗಡೆ ಮಾಡಲು ಮಿನಮೇಷ ಎಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜಿಲ್ಲಾಧಿಕಾರಿ ಅವರು ಈವರೆಗೂ ಕಾಮಗಾರಿ ವಿಕ್ಷಣೆ ಮಾಡಿಲ್ಲ. ಹೀಗಾಗಿ ಕಾಮಗಾರಿ ಇನ್ನು ಚುರುಕು ಪಡೆದುಕೊಂಡಿಲ್ಲ. ಈ ಬಾರಿ ಬಜೆಟ್’ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್, ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಸಖಾನ್, ಸಂಚಾಲಕ ರವಿ ನಾಯ್ಕ, ವಿನೋದ್, ಸುಬ್ಬೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
