ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಚೆನ್ನೈ – ಶಿವಮೊಗ್ಗ ಟೌನ್ ರೈಲು (shimoga chennai train) ಸಂಚಾರವನ್ನು ಇನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಾರದಲ್ಲಿ ಎರಡು ಬಾರಿ ಸಂಚರಿಸುವ ಶಿವಮೊಗ್ಗ – ಎಂಜಿಆರ್ ಚೆನ್ನೈ ಸೆಂಟ್ರಲ್ (shimoga chennai train) ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ 2022ರ ಡಿ.27ಕ್ಕೆ ಕೊನೆಯಾಗಬೇಕಿತ್ತು. ರೈಲ್ವೆ ಇಲಾಖೆ 2023ರ ಮಾರ್ಚ್ ಕೊನೆಯವರೆಗೆ ವಿಸ್ತರಣೆ ಮಾಡಿದೆ.
ಇದನ್ನೂ ಓದಿ – ಬೆಂಗಳೂರು, ಮೈಸೂರು ಹೊರತು ಶಿವಮೊಗ್ಗದಿಂದ ಉಳಿದೆಲ್ಲಿಗೆಲ್ಲ ರೈಲುಗಳು ಸಂಚರಿಸಲಿವೆ?
ಶಿವಮೊಗ್ಗ ಟೌನ್ – ಎಂಜಿಆರ್ ಚೆನ್ನೈ ಸೆಂಟ್ರಲ್ (ರೈಲು ಸಂಖ್ಯೆ 06223) ರೈಲು 2023ರ ಜನವರಿ 1 ರಿಂದ 2023ರ ಮಾರ್ಚ್ 28ರವರೆಗೆ ವಿಸ್ತರಿಸಲಾಗಿದೆ. ಇನ್ನು, ಎಂಜಿಆರ್ ಚೆನ್ನೈ ಸೆಂಟ್ರಲ್ – ಶಿವಮೊಗ್ಗ ಟೌನ್ ರೈಲು (ರೈಲು ಸಂಖ್ಯೆ 06224) ಸೇವೆಯನ್ನು 2023ರ ಜನವರಿ 2 ರಿಂದ 2023ರ ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.