ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕಳೆದ ಎರಡು ದಿನದಿಂದ ಅಬ್ಬರಿಸಿದ್ದ ಪುಷ್ಯಾ ಮಳೆ ಬಿಡುವು ನೀಡಿದೆ. ಇದರಿಂದ ತಗ್ಗು ಪ್ರದೇಶದ ಜನರು ನಿರಾಳರಾಗಿದ್ದಾರೆ. ಗದ್ದೆ, ತೋಟದಲ್ಲಿ ನೀರು ನಿಂತು ಬೆಳೆ ಹಾನಿಯಾಗುವ ಆತಂಕದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಧ್ಯಾಹ್ನದಿಂದ ಜಿಲ್ಲೆಯಾದ್ಯಂತ ಮಳೆ ಅಬ್ಬರ ತುಸು ಕಡಿಮೆಯಾಗಿದೆ. ಹಾಗಾಗಿ ಪ್ರವಾಹ ಭೀತಿ ದೂರಾಗಿದೆ.
ಸೀಗೆಹಟ್ಟಿ ಭಾಗದಲ್ಲಿ ಢವಢವ
ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾದಂತೆ ಶಿವಮೊಗ್ಗ ನಗರದ ಹಳೆ ಶಿವಮೊಗ್ಗ ಭಾಗ ಜಲಾವೃತವಾಗುವ ಭೀತಿ ಉಂಟಾಗಿತ್ತು. ಸಂಜೆ ವೇಳೆಗೆ ತುಂಗಾ ಜಲಾಶಯದಿಂದ 87 ಸಾವಿರ ಕ್ಯೂಸೆಕ್ ನೀರು ಹೊರ ಬಿಡುತ್ತಿದ್ದಂತೆ ಸೀಗೆಹಟ್ಟಿ ಸುತ್ತಮುತ್ತಲ ಪ್ರದೇಶಕ್ಕೆ ನೀರು ನುಗ್ಗಿತ್ತು. ಈಗ ತೀರ್ಥಹಳ್ಳಿ ಭಾಗದಲ್ಲಿ ಮಳೆ ಸ್ವಲ್ಪ ಬಿಡುವು ನೀಡಿದೆ. ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ತಗ್ಗುವ ಸಂಭವವಿದೆ. ಆದರೆ ಮಳೆ ಹೆಚ್ಚಾದರೆ ಮತ್ತೆ ಮುಳುಗಡೆ ಭೀತಿ ಎದುರಾಗಲಿದೆ.
ತಗ್ಗಿದ ಮಳೆ ಪ್ರಮಾಣ
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಸ್ವಲ್ಪ ತಗ್ಗಿದೆ. ಬಿಡುವು ಕೊಡದೆ ಸುರಿಯುತ್ತಿದ್ದ ಮಳೆ ಕಡಿಮೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ. ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದ ಮಳೆ ಬಿಡುವು ನೀಡಿದೆ.
ಪುಷ್ಯಾ ಮಳೆ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಮಳೆ ಕಡಿಮೆ ಆಗಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200