ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೀರ್ಥಹಳ್ಳಿ | ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದೆ, ಎದೆ ಮಟ್ಟದವರೆಗೆ ಹರಿಯುತ್ತಿರುವ ನೀರಿನಲ್ಲೇ (RAIN EFFECT) ಮೃತದೇಹ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ತಮ್ಮಯ್ಯ ಗೌಡ (80) ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನೀರಿನಲ್ಲಿ ಮೃತದೇಹದ ಮೆರವಣಿಗೆ
ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ ರಸ್ತೆಯಲ್ಲಿ ನೀರು ಹರಿಯುತ್ತದೆ. ತಮ್ಮಯ್ಯ ಗೌಡ ಅವರು ನಿಧನರಾದ ಹಿನ್ನೆಲೆ ಅವರ ಮೃತದೇವಹನ್ನು ಹರಿಯುವ ನೀರಿನಲ್ಲೇ ಮೆರವಣಿಗೆ ಮಾಡಲಾಯಿತು.
ಆರು ಮಂದಿ ಮೃತದೇಹವನ್ನ ನೀರಿನಲ್ಲಿ ಸಾಗಿಸುವ ದೃಶ್ಯವನ್ನು ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಹೊತ್ತವರ ಎದೆ ಮಟ್ಟದವರೆಗೂ ನೀರು (RAIN EFFECT) ಬಂದಿದೆ. ಇದೆ ದುಸ್ಥಿತಿಯಲ್ಲಿ ಮೃತದೇಹವನ್ನು ಸಂಬಂಧಿಗಳು, ಗ್ರಾಮಸ್ಥರು ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದಾರೆ.
ಸುರಿಯುವ ಮಳೆಯಲ್ಲೇ ಅಂತ್ಯಸಂಸ್ಕಾರ
ಇನ್ನು, ಸ್ಮಶಾನಕ್ಕೆ ಸೂಕ್ತ ವ್ಯವಸ್ಥೆ ಇಲ್ಲದ್ದರಿಂದ ಜೋರಾಗಿ ಸುರಿಯುವ ಮಳೆಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಶೀಟ್ ಹಾಕಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಕೊಳ್ಳಲಾಗಿತ್ತು.
ಮನವಿಗೂ ಕ್ಯಾರೆ ಅನ್ನುತ್ತಿಲ್ಲ
ಸ್ಮಶಾನದ ಹಾದಿಗೆ ಮಣ್ಣು ಹಾಕಿ ಎತ್ತರಿಸುವಂತೆ ಹಲವು ಭಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.
ಮಳೆಗಾಲ ಶುರುವಾದರೆ ಈ ಮಾರ್ಗದಲ್ಲಿ ನೀರು ಹರಿಯಲು ಆರಂಭವಾಗುತ್ತದೆ. ಮೂರ್ನಾಲ್ಕು ತಿಂಗಳು ರಸ್ತೆಯಲ್ಲಿ ನೀರು ಹರಿಯುವುದರಿಂದ ಸ್ಮಶಾನಕ್ಕೆ ಹೋಗಲು ಸಾದ್ಯವಾಗುವುದಿಲ್ಲ ಎಂದು ಆರೋಪಿಸುತ್ತಾರೆ.
ಮೃತದೇಹವನ್ನು ನೀರಿನಲ್ಲಿ ಹೊತ್ತು ಸಾಗುವ ದೃಶ್ಯ ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಇದು ಜನಪ್ರಿತಿನಿಧಿಗಳು, ಅಧಿಕಾರಿಗಳಿಗೆ ಎಚ್ಚರಗೊಳ್ಳುವಂತೆ ಮಾಡಿದೆ.
ಇದನ್ನೂ ಓದಿ – ಸ್ವೀಟ್ ಖರೀದಿಸಿ ಹಣ ಕೊಡಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಕಾದಿತ್ತು ಶಾಕ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.