ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನವಲಗುಂದ 40ನೇ ವರ್ಷದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಇವತ್ತು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇವುಗಳನ್ನು ಕೂಡಲೆ ಕೈ ಬಿಡಬೇಕು ಎಂದು ರೈತರು ಒತ್ತಾಯಿಸಿದರು.
ಇನ್ನು ವಿದ್ಯುತ್ ಶಕ್ತಿ ಕಾಯ್ದೆಗೆ ತಿದ್ದುಪಡಿಸಲು ತರಲು ನಿರ್ಧರಿಲಾಗಿದ್ದು. ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯನ್ನು ಖಾಸಗಿಯವರಿಗೆ ವಹಿಸುವ ಹುನ್ನಾರ ಇದರಲ್ಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಸಗೊಬ್ಬರದ ಬೆಲೆ ಭಾರೀ ಏರಿಕೆಯಾಗಿದೆ. ಅರ್ಧದಷ್ಟು ಬೆಲೆ ಇಳಿಕೆ ಮಾಡಬೇಕು. ಇನ್ನು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ರೈತರು ಆಗ್ರಹಿಸಿದರು. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]