ಶಿವಮೊಗ್ಗ ಲೈವ್.ಕಾಂ | SHIMOGA | 26 ಅಕ್ಟೋಬರ್ 2019
ಶಿವಮೊಗ್ಗ ಜಿಲ್ಲೆಯಾದ್ಯಂತ ಶುಕ್ರವಾರ ಮಧ್ಯಾಹ್ನದಿಂದ ನಿರಂತರ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ದೀಪಾವಳಿ ರಜೆಯಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಡಿಸಿ ಖಡಕ್ ಸೂಚನೆ ನೀಡಿದ್ದಾರೆ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಇನ್ನು ಭಾರಿ ಮಳೆಯ ಹಿನ್ನೆಲೆ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ದೀಪಾವಳಿ ಹಬ್ಬದ ರಜೆ ಇದ್ದರು ಕೇಂದ್ರ ಸ್ಥಾನ ಬಿಡಬಾರದು ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಭಾರಿ ಮಳೆಯಿಂದಾಗಿ ನದಿಗಳ ಹರಿವು ಹೆಚ್ಚಳವಾಗಿದೆ. ಜಲಾಶಯಗಳ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನಿನ್ನೆ ಸಂಜೆ 50 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಇವತ್ತು ಬೆಳಗ್ಗೆ 34,635 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 35,820 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ಭದ್ರಾ ಜಲಾಶಯಕ್ಕೆ 14,277 ಕ್ಯೂಸೆಕ್ ಒಳಹರಿವು ಇದೆ. 13,676 ಕ್ಯೂಸೆಕ್ ನೀರು ಹೊರಬಡಿಲಾಗುತ್ತಿದೆ. ಇನ್ನು, ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ 11,760 ಕ್ಯೂಸೆಕ್ ನೀರು ಒಳಹರಿವು ಇದೆ. 11,712 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
