SHIVAMOGGA LIVE NEWS | 17 MARCH 2023
SHIMOGA : ಬೀರೂರು ಮತ್ತು ಕಡೂರು ರೈಲ್ವೆ ನಿಲ್ದಾಣಗಳ ನಡುವೆ ಮಾರ್ಚ್ 18ರಂದು ವಿದ್ಯುತ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಎರಡು ರೈಲುಗಳನ್ನು ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ (Regulation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲು ಸಂಖ್ಯೆ 07366 ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಸ್ಪೇಷಲ್ ಎಕ್ಸ್ಪ್ರೆಸ್ ಹಾಗೂ ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ಕ್ರಮವಾಗಿ 15 ನಿಮಿಷ ಮತ್ತು 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ (Regulation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?