SHIVAMOGGA LIVE NEWS | 16 NOVEMBER 2022
SHIMOGA | ಕಾನೂನು, ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದ ಆರು ಪೊಲೀಸ್ ಠಾಣೆ ವ್ಯಾಪ್ತಿಯ 82 ರೌಡಿಗಳ ಪರೇಡ್ ನಡೆಸಲಾಯಿತು. ಪ್ರತಿ ರೌಡಿಯ (rowdy parade) ಹಿನ್ನೆಲೆ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಖಡಕ್ ವಾರ್ನಿಂಗ್ ನೀಡಿದರು.
ಡಿಎಆರ್ ಮೈದಾನದಲ್ಲಿ ರೌಡಿ ಪರೇಡ್ ನಡೆಸಲಾಯಿತು. ದೊಡ್ಡಪೇಟೆ, ಕೋಟೆ, ತುಂಗಾ ನಗರ, ಶಿವಮೊಗ್ಗ ಗ್ರಾಮಾಂತರ, ಜಯನಗರ ಮತ್ತು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ನಡೆಸಲಾಯಿತು. 82 ರೌಡಿಗಳು ಪರೇಡ್ ನಲ್ಲಿ ಭಾಗವಹಿಸಿದ್ದರು.
(rowdy parade)
ಎಸ್.ಪಿಯಿಂದ ಖಡಕ್ ವಾರ್ನಿಂಗ್
ಪ್ರತಿ ರೌಡಿಯ ಹಿನ್ನಲೆ ಕುರಿತು ಮಾಹಿತಿ ಪಡೆದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಕಾನುನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ ನೀಡಿದರು. ಪರೇಡ್ ನಲ್ಲಿ ಪಾಲ್ಗೊಂಡಿದ್ದವರ ಆದಾಯದ ಮೂಲ, ಜೀವನೋಪಾಯಕ್ಕೆ ಮಾಡುತ್ತಿರುವ ಕೆಲಸದ ಕುರಿತು ಮಾಹಿತಿ ಪಡೆದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಗಾಜನೂರು ಮೀನು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ, ಕೇಸ್ ದಾಖಲು
ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಪೊಲೀಸ್ ಠಾಣೆಗೆ ಹಾಜರಾಗಬೇಕು. ಹಾಜರಾತಿಗೆ ಸಹಿ ಹಾಕಬೇಕು. ಯಾವುದಾದರು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.