ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಜುಲೈ 2019
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಅವೈಜ್ಞಾನಿಕ ಯೋಜನೆಯನ್ನು ವಿರೋಧಿಸಿ ಸಾಗರದಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ತಾಲೂಕು ಕೇಂದ್ರ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದೆ.
ಸಾಗರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಖಾಸಗಿ ಬಸ್ ಸೇವೆ ಸ್ಥಗಿತಗೊಂಡಿರುವುದರಿಂದ, ಸದಾ ಗಿಜಿಗುಡುತ್ತಿದ್ದ ಸಾಗರ ಖಾಸಗಿ ಬಸ್ ನಿಲ್ದಾಣದ ಸ್ಥಬ್ಧವಾಗಿದೆ. ಇನ್ನು ವಾಹನ ಸಂಚಾರವೂ ವಿರಳವಾಗಿದೆ.
ಸಾಗರದ ಗ್ರಾಮೀಣ ಭಾಗದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಸಿಗಂದೂರಿಗೆ ತೆರಳುವ ಲಾಂಚ್’ಗಳನ್ನು ನಿಲ್ಲಿಸಲಾಗಿದೆ. ಜೋಗ್ ಫಾಲ್ಸ್, ತಾಳಗುಪ್ಪದಲ್ಲೂ ಕೂಡ ಬಂದ್’ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲೂ ಪ್ರತಿಭಟನಾ ಸಭೆಗಳು ನಡೆಯುತ್ತಿವೆ.





ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]