SHIVAMOGGA LIVE NEWS | 30 ಮಾರ್ಚ್ 2022
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಕನಿಷ್ಠ ವೇತ ನೀಡಬೇಕು. ಸಮವಸ್ತ್ರ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಸಂಪನ್ಮೂಲ ವ್ಯಕ್ತಿಗಳು ಬೇಡಿಕೆ ಏನು?
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಪನ್ಮೂಲ ವ್ಯಕ್ತಿಗಳಿಗೆ ಪ್ರತಿದಿನ 60 ರೂ.ನಂತೆ ತಿಂಗಳಿಗೆ 2,500 ರೂ. ಗೌರವ ಧನ ನೀಡಲಾಗುತ್ತಿದೆ. ಇದರಿಂದ ತಮ್ಮ ಜೀವನ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕನಿಷ್ಠ 15 ಸಾವಿರ ರೂ. ವೇತನ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು, ತಮ್ಮ ವೇತನವನ್ನು ಒಕ್ಕೂಟದ ಖಾತೆಗೆ ಜಮೆ ಆಗುತ್ತಿದೆ. ಇದನ್ನು ಬಿಡಿಸಿಕೊಳ್ಳುವುದು ಕಷ್ಟವಾಗಿದೆ. ಆದ್ದರಿಂದ ಹಣವನ್ನು ನೇರವಾಗಿ ತಮ್ಮ ಖಾತೆಗೆ ಹಾಕಬೇಕು. ಅಲ್ಲದೆ ತಮಗೆ ಸಮವಸ್ತ್ರ ಮತ್ತು ಗುರುತಿನ ಚೀಟಿಯನ್ನು ನೀಡಬೇಕು ಎಂದು ಆಗ್ರಹಿಸಿದರು.
ಸಂಪನ್ಮೂಲ ವ್ಯಕ್ತಿಗಳ ಕೆಲಸವೇನು?
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಕಾರ್ಯ ಚಟುವಟಿಕೆಗಳ ನಿರ್ವಹಣೆಗೆ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜನೆ ಮಾಡಲಾಗಿದೆ. ಸ್ವಸಹಾಯ ಗುಂಪುಗಳ ರಚನೆ, ಅವುಗಳ ನೋಂದಣಿ, ಸಂಘದ ಸಭೆಗಳಿಗೆ ಭೇಟಿ ನೀಡುವುದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುಟುಂಬಗಳ ಸರ್ವೆ, ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ, ನಮ್ಮ ಗ್ರಾಮ ನಮ್ಮ ಯೋಜನೆ ಸರ್ವೆ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜನೆ ಮಾಡಲಾಗಿದೆ.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200