ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020

ಅವಧಿ ಮೀರಿದ ಪರ್ಮಿಟ್’ಗಳನ್ನು ಇಟ್ಟುಕೊಂಡು, ಲಾರಿಯಲ್ಲಿ ಮರಳು ಸಂಗ್ರಹ ಮಾಡಿದ್ದ ಆರೋಪದ ಮೇಲೆ ದೊಡ್ಡಪೇಟೆ ಠಾಣೆ ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ನ್ಯೂ ಮಂಡ್ಲಿ ಬೈಪಾಸ್ ರಸ್ತೆಯಲ್ಲಿ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಮರಳು ತುಂಬಿದ್ದ 13 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಮಾಲೀಕರು ಮತ್ತು ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]