SHIVAMOGGA LIVE NEWS | SDPI| 12 ಏಪ್ರಿಲ್ 2022
ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ಕೂಡಲೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೆ ವೇಳೆ ಮಾತಾಡಿದ SDPI ಜಿಲ್ಲಾಧ್ಯಕ್ಷ ಇಮ್ರಾನ್, ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದಾಗಿ ಶಿವಮೊಗ್ಗ ಜಿಲ್ಲೆಗೆ ಕಳಂಕ ಅಂಟಕೊಂಡಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಬಂಧಿಸಲೆಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ | ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200