ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 MARCH 2021
ಭದ್ರಾವತಿ ಕೋರ್ಟ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬರಿಗೆ ಎರಡು ಸಾವಿರ ದಂಡ ವಿಧಿಸಿ, ಎಚ್ಚರಿಕೆ ನೀಡಲಾಗಿದೆ.
ಕಲಾಪ ನಡೆಯುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಗಮನಿಸಿದ 4ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೇಮಾವತಿ ಅವರು ದಂಡ ವಿಧಿಸಿದ್ದಾರೆ.
ಬ್ಯಾಂಕ್ ಒಂದರ ಕ್ರೆಡಿಟ್ ಕಾರ್ಡ್ ಪ್ರಮೋಷನ್ ಮಾಡುವ ಸಲುವಾಗಿ ವ್ಯಕ್ತಿ ತನ್ನ ಸಹೋದ್ಯೋಗಿ ಜೊತೆಗೆ ಕೋರ್ಟ್ ಆವರಣದಲ್ಲಿ ಸೆಲ್ಫಿ ಕ್ಲಿಕ್ಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಕೋರ್ಟ್ ಆವರಣದಲ್ಲಿ ವಿಡಿಯೋ ಚಿತ್ರೀಕರಣ, ಫೋಟೊ ತೆಗೆಯುವುದಕ್ಕೆ ನಿರ್ಬಂಧವಿದೆ. ಕೋರ್ಟ್ ಕಲಾಪಗಳನ್ನು ಚಿತ್ರೀಕರಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]