ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020
ಶಿವಮೊಗ್ಗದಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್ ಸಿದ್ಧಪಡಿಸಲಾಗಿದೆ. ಇದರಿಂದ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಯಾವುದು ಹೊಸ ಕಂಟೈನ್ಮೆಂಟ್ ಜೋನ್?
ಶಿವಮೊಗ್ಗದ ಡಿಎಆರ್ ಪೊಲೀಸ್ ಕ್ವಾರ್ಟರ್ಸ್ನ ಒಂದು ಕಟ್ಟಡದಲ್ಲಿ ಕಂಟೈನ್ಮೆಂಟ್ ಜೋನ್ ಸ್ಥಾಪಿಸಲಾಗಿದೆ. ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಈ ಜಾಗವನ್ನು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಭೇಟಿ
ಕಂಟೈನ್ಮೆಂಟ್ ಜೋನ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ತಹಶೀಲ್ದಾರ್ ನಾಗರಾಜ್ ಸೇರಿದಂತೆ ಅಧಿಕಾರಿಗಳು ಕಂಟೈನ್ಮೆಂಟ್ ಜೋನ್ಗೆ ಭೇಟಿ ನೀಡಿದರು. ಕಂಟೈನ್ಮೆಂಟ್ ಜೋನ್, ಬಫರ್ ಜೋನ್ ಮತ್ತು ಇಲ್ಲಿರುವವರ ಆರೋಗ್ಯ ತಪಾಸಣೆ ಕುರಿತು ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]