ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019
NEWS 1 | ಶಿವಮೊಗ್ಗದಲ್ಲಿ ಉದ್ಯೋಗ ಮೇಳ
ಶಿವಮೊಗ್ಗ : ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ 2ನೇ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನ.29ರಂದು ಬೆಳಗ್ಗೆ 10ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.08182-255293, ಮೊ. 8762778408 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
NEWS 2 ನಾನು ಜೆಡಿಎಸ್ ಬಿಡುವುದಿಲ್ಲ
ಶಿವಮೊಗ್ಗ : ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದ್ದಾರೆ. ಆ ಮೂಲಕ ರಾಜಕೀಯ ಊಹಾಪೋಹಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಶಿವಮೊಗ್ಗದ ನಂದಿ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ನಾನು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತೇನೆಂಬುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ತೊರೆಯುವ ತೀರ್ಮಾನವನ್ನು ನಾನೆಂದೂ ಮಾಡುವುದಿಲ್ಲ. ನಾನು ಕುಮಾರಸ್ವಾಮಿ ನಂಬಿಕೆಗೆ ಪಾತ್ರಳಾಗಿದ್ದೇನೆ. ಹೀಗಾಗಿ ಪಕ್ಷ ತೊರೆಯುವ ಪರಿಸ್ಥಿತಿ ಉದ್ಭವಿಸುವುದೇ ಇಲ್ಲ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Udyoga Mela has been organised in shimoga by the district administration. Former JDS MLA Sharadha Puryanaik has refused to join congress and to stay in JDS . Shivamogga Live. Shimoga News