ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ
SHIMOGA : ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಒಕ್ಕೂಟ ವ್ಯವಸ್ಥೆ ಕುರಿತು ನಂಬಿಕೆ ಇಲ್ಲದ ಹಾಗೆ ಸಚಿವರು ಅಧಿಕಾರಿಗಳ ಜೊತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ